ಬೆಂಗಳೂರು:ಕಾಡುಮಲ್ಲೇಶ್ವರ ಮಲ್ಲಿಕಾರ್ಜುನ ಸ್ವಾಮಿ ಸನ್ನಿಧಾನದಲ್ಲಿ ಕಾರ್ತಿಕ ಮಾಸದಲ್ಲಿ ಮೂರು ದಿನಗಳ ಕಾಲ ನಡೆಯುವ ಕಡಲೆಕಾಯಿ ಪರಿಷೆಗೆ ಕಾಡುಮಲ್ಲೇಶ್ವರ ಗೆಳೆಯರ ಬಳಗದ ಅಧ್ಯಕ್ಷ ಬಿ.ಕೆ.ಶಿವರಾಂ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಬೀದಿ ಬದಿಯ ವ್ಯಾಪಾರಿಗಳು ಮತ್ತು ಕರಕುಶಲ ವಸ್ತುಗಳ ಮಾರಾಟಗಾರರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೋಲಾರ, ಆಂಧ್ರಪ್ರದೇಶದ ಹಿಂದೂಪುರ, ತಮಿಳುನಾಡಿನ ವಿವಿಧ ಜಿಲ್ಲೆಗಳಿಂದ ಕಡಲೆಕಾಯಿ ಬೆಳೆದ ರೈತರು ಹಾಗೂ ಗ್ರಾಹಕರಿಗೆ ಇಲ್ಲಿ ನೇರ ಮಾರಾಟ ವ್ಯವಸ್ಥೆ ಮಾಡಲಾಗಿದೆ" ಎಂದರು.
ಕಾಡುಮಲ್ಲೇಶ್ವರ ಸ್ವಾಮಿಯ ಕಡಲೆಕಾಯಿ ಪರಿಷೆಗೆ ಚಾಲನೆ.. ಬಸವನಗುಡಿ ಕಡಲೆಕಾಯಿ ಪರಿಷೆ ಮಾದರಿ: "ಪುರಾತನ ಇತಿಹಾಸವಿರುವ ಬಸವನಗುಡಿ ಕಡಲೆಕಾಯಿ ಪರಿಷೆ ಮಾದರಿಯಲ್ಲಿ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಜರುಗುತ್ತಿದೆ. ಭಾರತೀಯ ಸಂಸ್ಕೃತಿ ಪ್ರತೀಕವಾದ ಹೊಂಗಲ್ ತಳಿಯ ಹಸುಗಳನ್ನು ದೇವಸ್ಥಾನಕ್ಕೆ ದಾನವಾಗಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಅಮೃತ್ ಮಹಲ್, ಹಳ್ಳಿಕಾರ್ ಸೇರಿದಂತೆ ವಿವಿಧ ತಳಿಯ ಹಸುಗಳನ್ನು ಸಾಕುವ ಗೋಶಾಲೆ ಆರಂಭಿಸಲಾಗುವುದು. ನಮ್ಮ ದೇಶದ ಸಂಸ್ಕೃತಿ ಸಂಪ್ರದಾಯ ಮುಂದಿನ ಯುವ ಸಮೂಹ ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂಬ ಉದ್ದೇಶದಿಂದ ಕಡಲೆಕಾಯಿ ಪರಿಷೆ ಆಯೋಜಿಸಲಾಗಿದೆ" ಎಂದರು.
ಮೇರುನಟ ಡಾ.ರಾಜ್ ಕುಮಾರ್ ಮತ್ತು ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸ್ಮರಣೆಯಲ್ಲಿ ಭಾನುವಾರ ರಾಜ್ ಗಾನ ವೈಭವ ಕಾರ್ಯಕ್ರಮ ಆಯೋಜಿಸಲಾಗಿದೆ. ಸೋಮವಾರ ಸಮಾರೋಪ ಸಮಾರಂಭದಲ್ಲಿ ಜಾನಪದ ಸಂಗೀತ ಏರ್ಪಡಿಸಲಾಗಿದೆ. ಧಾರ್ಮಿಕ ದತ್ತಿ ಇಲಾಖೆ ಮತ್ತು ಕಾಡುಮಲ್ಲೇಶ್ವರ ಗೆಳಯರ ಬಳಗದ ಸಹಯೋಗದಲ್ಲಿ ಮೂರು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ.
ಇದನ್ನೂ ಓದಿ:ಮಲ್ಲೇಶ್ವರದ ಕಾಡು ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಕಡಲೆಕಾಯಿ ಪರಿಷೆ: ಕಾಡು ಮಲ್ಲೇಶ್ವರ ಗೆಳಯರ ಬಳಗದ ಅಧ್ಯಕ್ಷ ಬಿ ಕೆ ಶಿವರಾಂ..