ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಕಂಬಳಿ ತೊಡಿಸಿ, ಕುರಿಮರಿ ನೀಡಿ ಕಾಡುಗೊಲ್ಲ ಸಮುದಾಯದ ಮುಖಂಡರು ಅಭಿನಂದನೆ ಸಲ್ಲಿಸಿದರು.
ಕಾಡುಗೊಲ್ಲರಿಗೆ ನಿಗಮ ಸ್ಥಾಪಿಸಿದ ಸಿಎಂ: ಕುರಿಮರಿ ನೀಡಿ ಗೊಲ್ಲರಿಂದ ಸನ್ಮಾನ - ಸಿಎಂ ಭೇಟಿಯಾದ ಕಾಡುಗೊಲ್ಲ ಸಮುದಾಯ
ಕಾಡುಗೊಲ್ಲ ಸಮುದಾಯಕ್ಕೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದಕ್ಕಾಗಿ ಕಾಡುಗೊಲ್ಲ ಸಮುದಾಯದ ಮುಖಂಡರು ಸಿಎಂ ಭೇಟಿ ಮಾಡಿ ಕುರಿಮರಿ ನೀಡಿ ಅಭಿನಂದನೆ ಸಲ್ಲಿಸಿದರು.
ಕಾಡುಗೊಲ್ಲ ಸಮುದಾಯ
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಚಿತ್ರದುರ್ಗ ಸಂಸದ ನಾರಾಯಣಸ್ವಾಮಿ ನೇತೃತ್ವದಲ್ಲಿ ಕಾಡುಗೊಲ್ಲ ಸಮುದಾಯದ ಮುಖಂಡರು ಭೇಟಿ ನೀಡಿದರು. ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದಕ್ಕಾಗಿ ಯಡಿಯೂರಪ್ಪ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಸಮುದಾಯದ ಪರವಾಗಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿ ಕುರಿಯನ್ನು ಉಡುಗೊರೆಯಾಗಿ ನೀಡಿದರು.