ಕರ್ನಾಟಕ

karnataka

ETV Bharat / state

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕ್ರಿಯಾ ಯೋಜನೆ ಸಮರೋಪಾದಿಯಲ್ಲಿ ಅನುಷ್ಠಾನಕ್ಕೆ ಸಿಎಂ ಸೂಚನೆ - CM Siddaramaiah

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ವೇಳೆ ಆ ಭಾಗದ ಅಭಿವೃದ್ಧಿಗೆ ಕ್ರಿಯಾ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಸಿಎಂ ಸೂಚಿಸಿದ್ದಾರೆ.

kalyana-karnataka-region-development-board-meeting-by-cm-siddaramaiah
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕ್ರಿಯಾ ಯೋಜನೆ ಸಮರೋಪಾದಿಯಲ್ಲಿ ಅನುಷ್ಠಾನಕ್ಕೆ ಸಿಎಂ ಸೂಚನೆ

By ETV Bharat Karnataka Team

Published : Jan 10, 2024, 7:08 AM IST

ಬೆಂಗಳೂರು:ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಪ್ರಸಕ್ತ ವರ್ಷದ ಕ್ರಿಯಾ ಯೋಜನೆಯನ್ನು ತ್ವರಿತ ಅನುಷ್ಠಾನ ಮಾಡಿ, ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನೆ ನಡೆಸುತ್ತ ಮಾತನಾಡಿದ ಸಿಎಂ, ಮಂಡಳಿಯಲ್ಲಿ ಪ್ರಸ್ತುತ 2,106 ಕೋಟಿ ರೂ. ಲಭ್ಯವಿದೆ. ಸರ್ಕಾರ ಅಧಿಕಾರಕ್ಕೆ ಬಂದ ನಂತರ 757.66 ಕೋಟಿ ರೂ. ವೆಚ್ಚ ಮಾಡಲಾಗಿದೆ, ಈ ಆರ್ಥಿಕ ವರ್ಷಾಂತ್ಯದ ವೇಳೆಗೆ ಇನ್ನೂ ಒಂದು ಸಾವಿರ ಕೋಟಿ ರೂ. ಖರ್ಚಾಗುವ ಸಾಧ್ಯತೆಗಳಿವೆ. ಇದಕ್ಕಾಗಿ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುವಂತೆ, ಮಂಡಳಿಯ ಅಧ್ಯಕ್ಷರು, ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರುಗಳು ಹಾಗೂ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಿ, ಹಿನ್ನಡೆ ಕಂಡಿರುವ ಯೋಜನೆಗಳ ತ್ವರಿತ ಅನುಷ್ಠಾನ ಮಾಡಬೇಕು. ಪ್ರಾರಂಭವಾಗದ ಕಾಮಗಾರಿಗಳನ್ನು ಮರುಪರಿಶೀಲನೆ ಮಾಡಿ, ಬದಲಿಸುವ ಮೂಲಕ ಸಕಾಲದಲ್ಲಿ ಅನುದಾನ ವೆಚ್ಚ ಮಾಡಬೇಕು. ಕಾಮಗಾರಿಗಳ ಅನುಷ್ಠಾನಕ್ಕೆ ನೀಲನಕ್ಷೆ ರೂಪಿಸಿ, ಅದರಂತೆ ಕಾರ್ಯನಿರ್ವಹಿಸಿ ಎಂದು ಸೂಚಿಸಿದರು.

ಮುಂದಿನ ವರ್ಷದ ಕ್ರಿಯಾ ಯೋಜನೆಯನ್ನು ಮಾರ್ಚ್‌ ಅಂತ್ಯದ ಒಳಗೆ ರೂಪಿಸಬೇಕು. ಎಸ್‌.ಸಿ.ಎಸ್‌.ಪಿ. / ಟಿ.ಎಸ್.ಪಿ. ಅಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರ ಜನಸಂಖ್ಯೆ ಶೇ. 50ಕ್ಕೂ ಹೆಚ್ಚಾಗಿ ವಾಸವಿರುವ ಸ್ಥಳಗಳನ್ನು ಅಭಿವೃದ್ಧಿಪಡಿಸಬೇಕು. ಪ್ರಗತಿಯಲ್ಲಿರುವ ಕೆಲಸಗಳನ್ನೆಲ್ಲ ಈ ವರ್ಷವೇ ಮುಗಿಸಿ, ಹಿಂದಿನ ವರ್ಷದ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಕೆಕೆಆರ್​​ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಸಚಿವರುಗಳಾದ ಶರಣ ಪ್ರಕಾಶ್ ಪಾಟೀಲ್, ಈಶ್ವರ್ ಖಂಡ್ರೆ, ಜಮೀರ್ ಅಹಮದ್ ಖಾನ್, ಶರಣಬಸಪ್ಪ ದರ್ಶನಾಪುರ, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಗಡಗಿ, ಬೋಸರಾಜು, ರಹೀಂ ಖಾನ್, ಡಿ ಸುಧಾಕರ್ ಜೊತೆಗೆ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಬಿ ಆರ್ ಪಾಟೀಲ್, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್ ಅವರು ಸಭೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ:ಗಣರಾಜ್ಯೋತ್ಸವ ಪಥಸಂಚಲನದಲ್ಲಿ ರಾಜ್ಯದ ಸ್ತಬ್ದಚಿತ್ರಗಳಿಗೆ ಅವಕಾಶ ನಿರಾಕರಿಸಿ ಕನ್ನಡಿಗರಿಗೆ ಅಪಮಾನ: ಸಿಎಂ ಕಿಡಿ

ABOUT THE AUTHOR

...view details