ಕರ್ನಾಟಕ

karnataka

ETV Bharat / state

ಬೆಂಗಳೂರು: ಕಚೇರಿಯಲ್ಲೇ ನೇಣು ಬಿಗಿದುಕೊಂಡು ಕಾಮಧೇನು ಸೊಸೈಟಿ ಅಧ್ಯಕ್ಷ ಆತ್ಮಹತ್ಯೆ - ಬಿಎಂ ರಾಮಕೃಷ್ಣ ಆತ್ಮಹತ್ಯೆ

ಕಾಮಧೇನು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಕಚೇರಿಗೆ ಬಂದಿದ್ದ ಅಧ್ಯಕ್ಷ ಬಿಎಂ ರಾಮಕೃಷ್ಣ, ಸೀಲಿಂಗ್ ಫ್ಯಾನ್‌ಗೆ ಹಗ್ಗ ಕಟ್ಟಿಕೊಂಡು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

kamadhenu-credit-cooperative-society-president-commits-suicide-in-bengaluru
ಬೆಂಗಳೂರು: ಕಚೇರಿಯಲ್ಲೇ ನೇಣು ಬಿಗಿದುಕೊಂಡು ಕಾಮಧೇನು ಸೊಸೈಟಿ ಅಧ್ಯಕ್ಷ ಆತ್ಮಹತ್ಯೆ

By

Published : Sep 28, 2022, 10:45 PM IST

ಬೆಂಗಳೂರು:ಹೂಡಿಕೆದಾರರಿಗೆ ಹಣ ಮರುಪಾವತಿಸಲು ಸಾಧ್ಯವಾಗದೇ ನೊಂದು ಕಾಮಧೇನು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ಬಿಎಂ ರಾಮಕೃಷ್ಣ (55) ಮೃತ ವ್ಯಕ್ತಿಯಾಗಿದ್ದಾರೆ.

ನಗರದ ಬೊಮ್ಮನಹಳ್ಳಿ ಹಳೇ ಕೆಇಬಿ ರಸ್ತೆ ಬಿಬಿಎಂಪಿ ಕಚೇರಿಯ ಹಿಂಭಾಗ ಕಾಮಧೇನು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯನ್ನು 5 ವರ್ಷದ ಹಿಂದೆ ತೆರೆಯಲಾಗಿತ್ತು. ಈ ಸೊಸೈಟಿಗೆ ಬಿಎಂ ರಾಮಕೃಷ್ಣ ಅಧ್ಯಕ್ಷರಾಗಿದ್ದರು. ಭಾನುವಾರ ಕಚೇರಿಗೆ ರಜೆಯಿದ್ದ ಹಿನ್ನೆಲೆಯಲ್ಲಿ ಕಚೇರಿಗೆ ಬಂದಿದ್ದ ರಾಮಕೃಷ್ಣ, ಸೀಲಿಂಗ್ ಫ್ಯಾನ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾರನೇ ದಿನ ಸೋಮವಾರ ಈ ಘಟನೆ ಬೆಳಕಿಗೆ ಬಂದಿದೆ.

ಅಲ್ಲದೇ, ಘಟನಾ ಸ್ಥಳದಲ್ಲಿ ಸೂಸೈಡ್ ನೋಟ್​ ಸಿಕ್ಕಿದೆ. ಸಂಸ್ಥೆಯ ಹಿಂದಿನ ಸಿಇಒ ಗಂಗಾಧರ್, ಮ್ಯಾನೇಜರ್ ಮತ್ತು ಪಿಗ್ಮಿ ವಸೂಲಿ ಮಾಡುತ್ತಿದ್ದ ಯೋಗೇಶ್ ಸೇರಿಕೊಂಡು ಸಂಸ್ಥೆಯ 60 ಲಕ್ಷ ರೂ. ದುರುಪಯೋಗ ಪಡಿಸಿಕೊಂಡಿದ್ದಾರೆ. ಸಾಲಗಳು ವಸೂಲಿಯಾಗದೇ ಹೂಡಿಕೆದಾರರಿಗೆ ಹಣ ಮರುಪಾವತಿಗೆ ಸಾಧ್ಯವಾಗದೇ ಹೂಡಿಕೆದಾರರಿಗೆ ಮೋಸವಾಗಿದೆ. ನನ್ನ ಆತ್ಮಹತ್ಯೆಗೆ ಗಂಗಾಧರ್, ನರೇಶ್ ಮತ್ತು ಯೋಗೇಶ್ ಕಾರಣ ಎಂದು ಡೆತ್‌ನೋಟ್‌ನಲ್ಲಿ ರಾಮಕೃಷ್ಣ ಉಲ್ಲೇಖಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಅಲ್ಲದೇ, ಈಗಾಗಲೇ ಮೂವರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಬೊಮ್ಮನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಸಿಐಡಿ ತನಿಖೆ ನಡುವೆಯೇ ಗ್ರಾಪಂ ಸದಸ್ಯ ದೀಪಕ್​ ಪಟದಾರಿ‌ ಪತ್ನಿ ಆತ್ಮಹತ್ಯೆ

ABOUT THE AUTHOR

...view details