ಬೆಂಗಳೂರು: ಆ್ಯಸಿಡ್ ಸಂತ್ರಸ್ತ ಯುವತಿಯ ಸರ್ಜರಿಗೆ ನೆರವಾಗುವ ಮೂಲಕ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಮಾದರಿಯಾಗಿದ್ದಾರೆ. ಸುಂಕದಕಟ್ಟೆಯಲ್ಲಿ ಕಿಡಿಗೇಡಿಯಿಂದ ಆ್ಯಸಿಡ್ ದಾಳಿಗೊಳಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಾಗಿರುವ ಯುವತಿಗೆ ಇತ್ತೀಚಿಗೆ ಸರ್ಜರಿಯಾಗಿದ್ದು, ರಕ್ತದ ಅವಶ್ಯಕತೆ ಇತ್ತು.
ಈ ಬಗ್ಗೆ ವಿಷಯ ತಿಳಿದ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಐದು ಯೂನಿಟ್ ರಕ್ತದಾನ ಮಾಡಿದರು. ಇನ್ಸ್ಪೆಕ್ಟರ್ ಪ್ರಶಾಂತ್ ಸೇರಿದಂತೆ ಐವರು ಸಿಬ್ಬಂದಿ ರಕ್ತದಾನ ಮಾಡಿದ್ದು, ಪ್ರಶಂಸೆಗೆ ಕಾರಣವಾಗಿದೆ.