ಕರ್ನಾಟಕ

karnataka

ETV Bharat / state

ಬೆಂಗಳೂರಲ್ಲಿ ಕತ್ತು ಬಿಗಿದು ವೃದ್ಧೆಯ ಕೊಲೆ: ಚಿನ್ನಾಭರಣ-ನಗದು ದೋಚಿ ದುಷ್ಕರ್ಮಿಗಳು ಪರಾರಿ - Kamakshipalya murder

ಬೆಂಗಳೂರಿನಲ್ಲಿ ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ವೇಲ್​ನಿಂದ ವೃದ್ಧೆಯನ್ನು ಕೊಲೆ ಮಾಡಿ ಹಣ ದೋಚಿಕೊಂಡು ಪರಾರಿಯಾಗಿದ್ದಾರೆ.

ಕೊಲೆ

By

Published : Sep 19, 2019, 7:54 AM IST

ಬೆಂಗಳೂರು: ಹಣಕ್ಕಾಗಿ ವೇಲ್‌ನಿಂದ ವೃದ್ಧೆಯೋರ್ವರ ಕತ್ತು ಬಿಗಿದು ಕೊಲೆ ಮಾಡಿರುವ ಘಟನೆ ನಗರದ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ.

ಪಾರ್ವತಮ್ಮ(62) ಕೊಲೆಯಾದವರು. ಇವರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಸುಂಕದಕಟ್ಟೆ ಮುತ್ತುರಾಯಸ್ವಾಮಿ ಬಡಾವಣೆಯ ನಿವಾಸಿ. ಪಾರ್ವತಮ್ಮ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ವೇಲ್‌ನಿಂದ ಕತ್ತು ಬಿಗಿದು ಕೊಲೆ ಮಾಡಿದ್ದಾರೆ. ಬಳಿಕ ಮನೆಯಲ್ಲಿರುವ ಹಣ, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳ ಪರಿಶೀಲಿಸಿದ್ದು, ಹಣಕ್ಕಾಗಿ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ABOUT THE AUTHOR

...view details