ಬೆಂಗಳೂರು :ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆಯನ್ವಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ-ತುರಾಯಿ, ಹಣ್ಣಿನ ಬುಟ್ಟಿ, ಶಾಲು ಹಾಗೂ ಯಾವುದೇ ರೀತಿಯ ಕಾಣಿಕೆ ನೀಡಬಾರದೆಂದು ಹಾಗೂ ಅದರ ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡಬಹುದೆಂದು ನಿರ್ದೇಶಿಸಲಾಗಿತ್ತು.
ಈ ವಿಷಯಕ್ಕೆ ಸಂಬಂಧಿಸಿದಂತೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಂದಿನ ದಿನಗಳಲ್ಲಿ ನಡೆಯುವ ಎಲ್ಲಾ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ-ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಸೇರಿ ಯಾವುದೇ ರೀತಿಯ ಕಾಣಿಕೆಗಳು ನೀಡುವ ಶಿಷ್ಟಾಚಾರ ಸಂಪ್ರದಾಯವನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸುತ್ತದೆ ಮತ್ತು ಕಾಣಿಕೆಗಳ ಬದಲಾಗಿ ಆಡಳಿತ ಭಾಷೆಯಾದ ಕನ್ನಡ ಪುಸ್ತಕಗಳನ್ನು ನೀಡಬಹುದಾಗಿದೆ ಎಂದು ತಿಳಿಸಿದ್ದಾರೆ.