ಬೆಂಗಳೂರು : ಅರಣ್ಯ ಇಲಾಖೆಯ ಸಾಮಾಜಿಕ ಜಾಲತಾಣ, ಕಡತಗಳಲ್ಲಿ ಹೆಚ್ಚಾಗಿ ಆಂಗ್ಲ ಭಾಷೆಯನ್ನೇ ಬಳಸಿರುವ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅಸಮಾಧಾನ ವ್ಯಕ್ತಪಡಿಸಿದರು.
ಮಲ್ಲೇಶ್ವರದಲ್ಲಿರುವ ಅರಣ್ಯ ಭವನ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಭೇಟಿ ನೀಡಿ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಕನ್ನಡ ಭಾಷೆ ಕರ್ನಾಟದ ಆಡಳಿತ ಭಾಷೆಯಾಗಿ ಹಲವು ದಶಕಗಳು ಕಳೆದಿದ್ದರೂ ಇನ್ನೂ ಆಂಗ್ಲ ಭಾಷೆಯಲ್ಲಿಯೇ ಅರಣ್ಯ ಇಲಾಖೆಯ ಅಧಿಕಾರಿಗಳು ವ್ಯವಹಾರ ನಡೆಸಿರುತ್ತಿರುವುದು ಆಡಳಿತದಲ್ಲಿ ಕನ್ನಡ ಅನುಷ್ಠಾನದ ಲೋಪವೆಸಗಿದಂತೆ. ಈ ಬಗ್ಗೆ ಪ್ರಾಧಿಕಾರ ಗಂಭೀರ ಕ್ರಮಕೈಗೊಳ್ಳಲಿದೆ ಎಂದು ಎಚ್ಚರಿಸಿದರು.