ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಉದ್ದಿಮೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅಳವಡಿಸುವ ಕುರಿತು ಬಿಬಿಎಂಪಿ ಆಯುಕ್ತರಾದ ಬಿ.ಹೆಚ್ ಅನಿಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಬಿಬಿಎಂಪಿ ಮಹತ್ವದ ಆದೇಶ: ಇನ್ಮುಂದೆ ಉದ್ದಿಮೆಗಳು ಕಡ್ಡಾಯವಾಗಿ ಕನ್ನಡ ನಾಮಫಲಕ ಹಾಕಲೇಬೇಕು!
ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಉದ್ದಿಮೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅಳವಡಿಸುವುದು ಅನಿವಾರ್ಯ. ಈ ಬಗ್ಗೆ ಬಿಬಿಎಂಪಿ ಆಯುಕ್ತ ಬಿ.ಹೆಚ್ ಅನಿಲ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಬಿಬಿಎಂಪಿ ಕನ್ನಡ ಭಾಷೆ ಕಡ್ಡಾಯಕ್ಕೆ ಮುಂದಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಉದ್ದಿಮೆಗಳ ನಾಮಫಲಕಗಳಿಗೆ ಕನ್ನಡ ಭಾಷೆ ಖಡ್ಡಾಯ
ಮೇಯರ್ ಗೌತಮ್ ಕುಮಾರ್ ಸೂಚನೆಯಂತೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅಂಗಡಿ ಮುಂಗಟ್ಟುಗಳು, ಹೋಟೆಲ್ಗಳು ಹಾಗೂ ವಿವಿಧ ರೀತಿಯ ಸಂಸ್ಥೆಗಳು ಅಳವಡಿಸುವ ನಾಮಫಲಕಗಳಲ್ಲಿ, ನವೆಂಬರ್ 1 ರಿಂದ ಶೇಕಡಾ 60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಕನ್ನಡ ನಾಮಫಲಕ ಅಳವಡಿಸದಿದ್ದಲ್ಲಿ, ಅಂತಹ ಉದ್ದಿಮೆಗಳ ಪರವಾನಗಿಯನ್ನು ರದ್ದುಪಡಿಸಲಾಗುವುದೆಂದು ಆಯುಕ್ತರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಹೊಸ ಪರವಾನಗಿ ನೀಡುವಾಗಲೂ ಕನ್ನಡ ನಾಮಫಲಕ ಅಳವಡಿಸುವುದು ಕಡ್ಡಾಯ ಮಾಡಲಾಗಿದೆ.