ಬೆಂಗಳೂರು: 65ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಬಿಎಸ್ವೈ ನಿವಾಸದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ: ಕನ್ನಡಾಂಬೆಗೆ ಸಿಎಂ ಪುಷ್ಪನಮನ - ಸಿಎಂ ನಿವಾಸದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ
ಕಂಠೀರವ ಕ್ರೀಡಾಂಗಣದಲ್ಲಿ ಆಯೋಜನೆ ಮಾಡಿರುವ ಕನ್ನಡ ರಾಜ್ಯೋತ್ಸವ ಸರ್ಕಾರಿ ಸಮಾರಂಭದಲ್ಲಿ ಪಾಲ್ಗೊಳ್ಳುವ ಮುನ್ನ ನಿವಾಸದಲ್ಲಿ ಕನ್ನಡಾಂಬೆ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಸರಳ ಕನ್ನಡ ರಾಜ್ಯೋತ್ಸವ ಆಚರಿಸಿದರು. ಬಳಿಕ ನಾಡಿನ ಜನತೆಗೆ ಶುಭಾಶಯ ಕೋರಿದರು.

ಕಂಠೀರವ ಕ್ರೀಡಾಂಗಣದಲ್ಲಿ ಆಯೋಜನೆ ಮಾಡಿರುವ ಕನ್ನಡ ರಾಜ್ಯೋತ್ಸವ ಸರ್ಕಾರಿ ಸಮಾರಂಭದಲ್ಲಿ ಪಾಲ್ಗೊಳ್ಳುವ ಮುನ್ನ ನಿವಾಸದಲ್ಲಿ ಕನ್ನಡಾಂಬೆ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಸರಳ ಕನ್ನಡ ರಾಜ್ಯೋತ್ಸವ ಆಚರಿಸಿದರು.
ಇದೇ ವೇಳೆ ನಾಡಿನ ಸಮಸ್ತ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 65ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ. ಕನ್ನಡ ಭಾಷೆ, ಸಂಸ್ಕೃತಿಗಳ ರಕ್ಷಣೆಯ ಜೊತೆಗೆ ಸಮೃದ್ಧ, ಆರೋಗ್ಯಪೂರ್ಣ, ಸಹಬಾಳ್ವೆಯ, ಅಭಿವೃದ್ಧಿಶೀಲ ಕರ್ನಾಟಕದ ನಿರ್ಮಾಣದ ನಿಟ್ಟಿನಲ್ಲಿ ಸಮಸ್ತ ಕನ್ನಡಿಗರೂ ಒಂದಾಗಿ ಮುನ್ನಡೆಯೋಣ. ಹಸಿರಾಗಲಿ ಕರ್ನಾಟಕ, ಉಸಿರಾಗಲಿ ಕನ್ನಡ! ಎಂದು ಶುಭ ಕೋರಿದ್ದಾರೆ.