ಬೆಂಗಳೂರು:ಕೋವಿಡ್, ಲಾಕ್ಡೌನ್ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಕನ್ನಡ ಸಾಹಿತ್ಯ ಪರಿಷತ್(ಕಸಾಪ) ಚುನಾವಣೆಗೆ ಕಡೆಗೂ ದಿನಾಂಕ ನಿಗದಿಯಾಗಿದೆ. ಕಸಾಪ ರಾಜ್ಯಾಧ್ಯಕ್ಷ, ಜಿಲ್ಲಾ ಘಟಕ ಮತ್ತು ಗಡಿನಾಡು ಘಟಕಗಳ ಅಧ್ಯಕ್ಷ ಸ್ಥಾನಕ್ಕೆ ನ.21 ರಂದು ಚುನಾವಣೆ ನಡೆಯಲಿದ್ದು, ನ.24 ರಂದು ರಾಜ್ಯಾಧ್ಯಕ್ಷ ಸ್ಥಾನದ ಫಲಿತಾಂಶ ಪ್ರಕಟಗೊಳ್ಳಲಿದೆ. ಕಸಾಪ ಕೇಂದ್ರ ಚುನಾವಣಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸರ್ಕಾರದ ಆದೇಶದಂತೆ ಸ್ಥಗಿತಗೊಂಡಿದ್ದ ಚುನಾವಣಾ ಪ್ರಕ್ರಿಯೆಯನ್ನು ನಡೆಸಲು ಪೂರ್ವ ಸಿದ್ಧತೆ ಕೈಗೊಂಡಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ಚುನಾವಣಾ ಮುಹೂರ್ತ ಫಿಕ್ಸ್: ನ.21 ರಂದು ಚುನಾವಣೆ ನಿಗದಿ - ಕನ್ನಡ ಸಾಹಿತ್ಯ ಪರಿಷತ್ ಚುನಾವಣಾ ದಿನಾಂಕ ಪ್ರಕಟ
ಕನ್ನಡ ಸಾಹಿತ್ಯ ಪರಿಷತ್(ಕಸಾಪ) ಚುನಾವಣೆ ನ.21 ರಂದು ನಡೆಯಲಿದ್ದು, ನ.24 ರಂದು ಫಲಿತಾಂಶ ಹೊರ ಬೀಳಲಿದೆ.
ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ ಜೊತೆಗೆ ಗಡಿನಾಡು, ಹೊರನಾಡು, ಮತದಾರರಿಗೆ ರಿಜಿಸ್ಟರ್ಡ್ ಅಂಚೆ ಮೂಲಕ ಮತಪತ್ರಗಳ ರವಾನೆಗೆ ನ.06 ಕೊನೆಯ ದಿನವಾಗಿದೆ. ನ.21 ರ ಬೆಳಗ್ಗೆ 8 ರಿಂದ ಸಂಜೆ 4 ರವರೆಗೆ ರಾಜ್ಯದ ಎಲ್ಲ ತಾಲೂಕು ಕೇಂದ್ರ, ಹಾಲಿ, ಹೋಬಳಿ ಮತ ಕೇಂದ್ರ ಮತ್ತು ಬೆಂಗಳೂರು ನಗರ ಜಿಲ್ಲೆಯ 27 ವಿಧಾನಸಭಾ ಕ್ಷೇತ್ರಗಳಲ್ಲಿ ಗುರುತಿಸಲಾದ ಮತ ಕೇಂದ್ರಗಳಲ್ಲಿ ಮತದಾನ ನಡೆಯಲಿದೆ. ಫಲಿತಾಂಶವನ್ನು ಆಧರಿಸಿ ಪರಿಷತ್ ರಾಜ್ಯಾಧ್ಯಕ್ಷ ಆಯ್ಕೆ ಪ್ರಕಟಿಸಲಾಗುತ್ತದೆ.
ಇದನ್ನೂ ಓದಿ: ಕೋಟಿಗೊಬ್ಬ 3 ಬಿಡುಗಡೆ ಆಗದಂತೆ ಷಡ್ಯಂತ್ರ: ಕ್ಷಮೆಯಾಚಿಸಿದ ನಿರ್ಮಾಪಕ ಸೂರಪ್ಪ ಬಾಬು
TAGGED:
ಬೆಂಗಳೂರು ಲೇಟೆಸ್ಟ್ ನ್ಯೂಸ್