ಬೆಂಗಳೂರು:ಕನ್ನಡ ಸಾಹಿತ್ಯ ಪರಿಷತ್ತಿನ(Kannada Sahitya Parishad) ರಾಜ್ಯಾಧ್ಯಕ್ಷ ಸ್ಥಾನಕ್ಕೆ, ಜಿಲ್ಲಾಧ್ಯಕ್ಷ ಹಾಗೂ ಗಡಿನಾಡು ಘಟಕಗಳ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ(election) ನಡೆಯಲಿದೆ. ಬೆಳಗ್ಗೆ 8 ರಿಂದ ಸಂಜೆ 4 ರವರೆಗೆ ಚುನಾವಣೆಯನ್ನು ನಡೆಸಲು ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ರಾಜ್ಯಾಧ್ಯಕ್ಷ ಸ್ಥಾನಕ್ಕೆ 21 ಅಭ್ಯರ್ಥಿಗಳು, 30 ಜಿಲ್ಲಾ ಘಟಕಗಳ ಅಧ್ಯಕ್ಷ ಸ್ಥಾನಕ್ಕೆ 223 ಅಭ್ಯರ್ಥಿಗಳು ಹಾಗೂ ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಗಡಿನಾಡು ಘಟಕಗಳ ಅಧ್ಯಕ್ಷ ಸ್ಥಾನಗಳಿಗೆ 16 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.
ಗಡಿನಾಡು ಹಾಗೂ ಹೊರನಾಡಿನಲ್ಲಿರುವ ಮತದಾರರಿಗೆ ಪೋಸ್ಟಲ್ ಮೂಲಕ ಮತಪತ್ರಗಳನ್ನು ರವಾನಿಸಲಾಗಿದೆ. ಶೇ.70 ರಷ್ಟು ಮಂದಿ ಅಂಚೆ ಮೂಲಕ ಮತದಾನ ಕೂಡ ಮಾಡಿದ್ದಾರೆ. ಈ ಬಾರಿ ಪರಿಷತ್ತಿನ ಚುನಾವಣೆಯಲ್ಲಿ 3.10 ಲಕ್ಷ ಮತದಾರರು ಇದ್ದು, ಬೆಂಗಳೂರು ನಗರ ಜಿಲ್ಲಾ ಕಸಾಪ ಘಟಕದಲ್ಲಿ 36,389 ಮಂದಿ ಮತದಾರರು ಮತದಾನ ಮಾಡಲಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ 28 ವಿಧಾನಸಭಾ ಕ್ಷೇತ್ರಗಳ 42 ಮತ ಕೇಂದ್ರಗಳಲ್ಲಿ ಮತದಾನ ನಡೆಯಲಿದೆ.