ಕರ್ನಾಟಕ

karnataka

ETV Bharat / state

4 ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕನ್ನಡ ಬೋಧನೆ - engineering colleges kannada teaching

ರಾಷ್ಟ್ರೀಯ ಮಾನ್ಯತಾ ಮಂಡಳಿ (ಎನ್ ಬಿಎ) ಮಾನ್ಯತೆ ಪಡೆದಿರುವ ಕಾಲೇಜುಗಳಿಗೆ ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಬೋಧಿಸಲು ಅವಕಾಶ ನೀಡಲಾಗಿದೆ..

Dr. CN Ashwath Narayan
ಡಾ. ಸಿ. ಎನ್ ಅಶ್ವತ್ಥ್​ ನಾರಾಯಣ

By

Published : Sep 29, 2021, 4:46 PM IST

ಬೆಂಗಳೂರು :ರಾಜ್ಯದ 4 ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಈ ಸಾಲಿನಿಂದಲೇ ಕನ್ನಡದಲ್ಲಿ ಬೋಧನೆ-ಕಲಿಕೆ ಆರಂಭವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್ ಅಶ್ವತ್ಥ್​ ನಾರಾಯಣ ತಿಳಿಸಿದರು.

ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಶುಲ್ಕದ ವಿಚಾರವಾಗಿ ವಿಕಾಸಸೌಧದಲ್ಲಿ ಬುಧವಾರ ಸಭೆ ನಡೆಸಿದ ಮೇಲೆ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ಮಹಾವಿದ್ಯಾಲಯ (ಸಿವಿಲ್), ಚಿಕ್ಕಬಳ್ಳಾಪುರದ ಎಸ್ ಜೆಸಿ ತಾಂತ್ರಿಕ ಮಹಾವಿದ್ಯಾಲಯ (ಸಿವಿಲ್), ಮೈಸೂರಿನ ಮಹಾರಾಜ ತಾಂತ್ರಿಕ ಮಹಾವಿದ್ಯಾಲಯ (ಮೆಕ್ಯಾನಿಕಲ್) ಮತ್ತು ವಿಜಯಪುರದ ಬಿಎಲ್ ಡಿಇಎ ವಿಪಿ ಡಾ.ಪಿ ಜಿ ಹಳಕಟ್ಟಿ ಇಂಜಿನಿಯರಿಂಗ್ ಕಾಲೇಜು (ಮೆಕ್ಯಾನಿಕಲ್)ಗಳಲ್ಲಿ ಕನ್ನಡದಲ್ಲಿ ಇಂಜಿನಿಯರಿಂಗ್ ಬೋಧನೆಗೆ ತಯಾರಿ ನಡೆದಿದೆ.

ಈ ಕಾಲೇಜುಗಳಲ್ಲಿ ತಲಾ 30 ವಿದ್ಯಾರ್ಥಿಗಳು ಈ ಕೋರ್ಸ್​ಗಳನ್ನು ತೆಗೆದುಕೊಳ್ಳಬಹುದು ಎಂದು ಹೇಳಿದರು. ರಾಷ್ಟ್ರೀಯ ಮಾನ್ಯತಾ ಮಂಡಳಿ (ಎನ್ ಬಿಎ) ಮಾನ್ಯತೆ ಪಡೆದಿರುವ ಕಾಲೇಜುಗಳಿಗೆ ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಬೋಧಿಸಲು ಅವಕಾಶ ನೀಡಲಾಗಿದೆ ಎಂದರು.

ಓದಿ:ಮಂಗಳೂರು : ಎಂಆರ್​​ಪಿಎಲ್​ನಿಂದ ಬರೋಡಾದ ಒಪಲ್​ಗೆ ಮೊದಲ ಬಾರಿಗೆ ನಾಫ್ತಾ ರವಾನೆ..

ABOUT THE AUTHOR

...view details