ಬೆಂಗಳೂರು :ಕಾನೂನಿನಲ್ಲಿ ಕನ್ನಡವನ್ನು ತಂದಿದ್ದರಿಂದ ನ್ಯಾಯಾಲಯಗಳಲ್ಲಿ ಇಂದು ಕನ್ನಡ ಹೆಚ್ಚಾಗಿ ಬಳಕೆಯಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಹಾಗೂ ಭಾಷಾಂತರ ನಿರ್ದೇಶನಾಲಯ ಹೊರ ತಂದಿರುವ ಕಾನೂನು ಪದಕೋಶ ಹಾಗೂ 15 ಕೇಂದ್ರ ಅಧಿನಿಯಮಗಳನ್ನು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಲೋಕಾರ್ಪಣೆ ಮಾಡಿ ಮಾತನಾಡಿದ್ದಾರೆ.
ಕಾನೂನು ನಿಘಂಟು ಕೆಲಸ ಯಶಸ್ವಿಯಾಗಿದೆ. 2003ರಲ್ಲಿ ಎಲ್ಲಾ ಕಾನೂನುಗಳನ್ನು ಕನ್ನಡಕ್ಕೆ ಭಾಷಾಂತರ ಮಾಡಿದ ನಂತರ ಅವು ಜನ ಸಾಮಾನ್ಯರಿಗೆ ತಲುಪಿದವು. ಕಾನೂನುಗಳ ಅರ್ಥ ವ್ಯಾಪಕವಾಗಿ ಪ್ರಚಾರವಾಯಿತು.