ಬಳ್ಳಾರಿ: ಸಾಮಾಜಿಕ ಪಿಡುಗುಗಳಾದ ಕಾಲರಾ, ಪ್ಲೇಗ್ ಇತರೆ ಮಹಾಮಾರಿಗಳು ಹಿಂದಿನ ಕಾಲದಲ್ಲಿ ಸಾಮಾಜಿಕ ಪಿಡುಗುಗಳಾಗಿ ಜಗತ್ತನ್ನೇ ಬಾಧಿಸಿವೆ. ಇಂದು ಕೋವಿಡ್-19 ಕೊರೊನಾ ವೈರಸ್ ಜಗತ್ತನ್ನೇ ತಲ್ಲಣಗೊಳಿಸಿದೆ. ಇಂತಹ ಸಂದರ್ಭದಲ್ಲಿಯೂ ಕೂಡ ನಾವು ಜೀವನ ಕಟ್ಟಿಕೊಳ್ಳಬೇಕಾಗಿದೆ. ಮುಖ್ಯವಾಗಿ ಎಲ್ಲರನ್ನು ಅನುಮಾನದ ದೃಷ್ಟಿಯಿಂದ ನೋಡುವ ಪರಿಸ್ಥಿತಿ ನಿರ್ಮಾಣವಾಗಿರುವುದು ನೋವಿನ ಸಂಗತಿ ಎಂದು ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಸ.ಚಿ.ರಮೇಶ್ ವಿಷಾದ ವ್ಯಕ್ತಪಡಿಸಿದರು.
ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಭುವನ ವಿಜಯ ಕಟ್ಟಡದಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶದ ವತಿಯಿಂದ ಶನಿವಾರ ಸಾಂಕ್ರಾಮಿಕ ರೋಗ ಕೋವಿಡ್-19 ಅರಿವಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಮ್ಮ ಕುಟುಂಬದ ಸದಸ್ಯರ ಜೊತೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ದುಸ್ಥಿತಿ ಬಂದಿದೆ ಎಂದರು.