ಬೆಂಗಳೂರು :ಬೈಕ್ನಲ್ಲಿ ತೆರಳುತ್ತಿದ್ದಾಗ ಟ್ಯಾಂಕರ್ಗೆ ಡಿಕ್ಕಿ ಹೊಡೆದು ಖಳನಟ, ನಿರ್ದೇಶಕ ಸೂರ್ಯೋದಯ ಅವರ ಪುತ್ರ ಸಾವನ್ನಪ್ಪಿರುವ ಘಟನೆ ಕಳೆದ ರಾತ್ರಿ ನಗರದ ಬ್ಯಾಡರಹಳ್ಳಿಯ ನ್ಯೂ ಲಿಂಕ್ ರಸ್ತೆಯಲ್ಲಿ ಸಂಭವಿಸಿದೆ.
ಸೂರ್ಯೋದಯ ಅವರ ಮಗ ಪುತ್ರ ಮಯೂರ್ (20) ಮೃತ ಯುವಕ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಬಗ್ಗೆ ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.