ಬೆಂಗಳೂರು: ನಾಳೆ ಕರಗ ಆಚರಣೆ ಇಲ್ಲ ಎಂದು ಧರ್ಮರಾಯಸ್ವಾಮಿ ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.
ನಾಳೆ ಬೆಂಗಳೂರು ಕರಗ ಆಚರಣೆ ಇಲ್ಲ: ದೇವಾಲಯದ ಆಡಳಿತ ಮಂಡಳಿ ಸ್ಪಷ್ಟನೆ - Karaga celebration is not there in Bangalore
ನಾಳೆ ಬೆಂಗಳೂರಿನಲ್ಲಿ ಕರಗ ಆಚರಣೆ ನಿರ್ಬಂಧಿಸಿರುವುದಾಗಿ ದೇವಾಲಯದ ಆಡಳಿತ ಮಂಡಳಿ ಮತ್ತು ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ನಾಳೆ ಬೆಂಗಳೂರು ಕರಗ ಆಚರಣೆ ಇಲ್ಲ
ಕೊರೊನಾ ವೈರಸ್ ಭೀತಿ ಹಿನ್ನೆಲೆ ಕರಗ ಆಚರಣೆಯೂ ಬೇಡ ಎಂದು ಹೈಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ ಧರ್ಮರಾಯಸ್ವಾಮಿ ದೇವಾಲಯದ ಆಡಳಿತ ಮಂಡಳಿ ಈ ನಿರ್ಧಾರಕ್ಕೆ ಬಂದಿದೆ.
ಈ ಕುರಿತು ಬೆಂಗಳೂರು ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಕರಗ ಆಚರಣೆ ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಆಚರಣೆ, ಮೆರವಣಿಗೆ ಸೇರಿ ಯಾವುದೇ ಬಹಿರಂಗ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ ಎಂದು ಆದೇಶಿಸಿದ್ದಾರೆ.