ಕರ್ನಾಟಕ

karnataka

ETV Bharat / state

ಶೇಖಾವತ್ ಭೇಟಿಯಾದ ಕಾರಜೋಳ: ನೀರಾವರಿ ಯೋಜನೆಗಳ ಕುರಿತು ಮಾತುಕತೆ

ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭೇಟಿ ಮಾಡಿದ್ದಾರೆ. ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ಬಗ್ಗೆ ಅವರೊಂದಿಗೆ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

Water Resources Minister Govinda Karajola
ಶೇಖಾವತ್ ಭೇಟಿಯಾದ ಕಾರಜೋಳ

By

Published : Dec 13, 2022, 1:59 PM IST

ಶೇಖಾವತ್ ಭೇಟಿಯಾದ ಕಾರಜೋಳ

ಬೆಂಗಳೂರು: ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಮೇಕೆದಾಟು, ಕೃಷ್ಣಾ ಮೇಲ್ದಂಡೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗಳ ಕುರಿತು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾತುಕತೆ ನಡೆಸಿದರು.

ನವದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ ನಿವಾಸಕ್ಕೆ ರಾಜ್ಯದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭೇಟಿ ನೀಡಿದರು. ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಕೇಂದ್ರದಲ್ಲಿ ಬಾಕಿ ಇರುವ ಅನುಮೋದನೆಗಳನ್ನು ದೊರಕಿಸಿ ಕೊಡುವಂತೆ ವಿನಂತಿಸಿದರು.

ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಮೇಕೆದಾಟು, ಕೃಷ್ಣ ಮೇಲ್ದಂಡೆ ಕುರಿತು ಮಹತ್ವದ ಚರ್ಚೆ ನಡೆಯಿತು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಅನುಮೋದನೆ ನೀಡುವಂತೆ ಕೋರಿದರು. ನೀರಾವರಿ ಯೋಜನೆಗಳ ಕುರಿತು ಮಹತ್ವದ ಮಾತುಕತೆ ನಡೆಸಿದರು.

ಇದನ್ನೂ ಓದಿ:ರಾಜ್ಯದಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ಅನುದಾನ ಒದಗಿಸುವಂತೆ ಕೇಂದ್ರಕ್ಕೆ ಸಿಎಂ ಮನವಿ

ಶೇಖಾವತ್ ಭೇಟಿ ನಂತರ ಭದ್ರ ಮೇಲ್ದಂಡೆ ಯೋಜನೆಯ ಪ್ರಸ್ತಾವನೆ ಅಂತಿಮ ಹಂತದಲ್ಲಿದ್ದು, ಈ ಯೋಜನೆಗೆ ಮುಂದಿನ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆಯುವ ವಿಶ್ವಾಸವಿದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಹದಾಯಿ ಯೋಜನೆಯ ಅನುಮೋದನೆ ಆದಷ್ಟು ಬೇಗ ದೊರಕುವ ನಿರೀಕ್ಷೆ ಇದೆ ಎಂದು ಸಚಿವರು ತಿಳಿಸಿದ್ದಾರೆ.

ABOUT THE AUTHOR

...view details