ಕರ್ನಾಟಕ

karnataka

By

Published : Sep 28, 2020, 8:13 AM IST

ETV Bharat / state

ಬೆಳ್ಳಂಬೆಳಗ್ಗೆ ಏರ್​ಪೋರ್ಟ್​​ಗೆ​ ನುಗ್ಗಲು ಯತ್ನಿಸಿದ ಕರವೇ ಕಾರ್ಯಕರ್ತರು: 12 ಮಂದಿ ಪೊಲೀಸರ ವಶಕ್ಕೆ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕರವೇಯ 12 ಕಾರ್ಯಕರ್ತರನ್ನು ಏರ್​ಪೋರ್ಟ್​​ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Devanahalli
ಬೆಳ್ಳಂ ಬೆಳಿಗ್ಗೆ ಏರ್ಪೋರ್ಟ್ ಒಳಗೆ ನುಗ್ಗಿದ ಕರವೇ ಕಾರ್ಯಕರ್ತರು ಪೊಲೀಸರ ವಶಕ್ಕೆ

ದೇವನಹಳ್ಳಿ: ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರ್ನಾಟಕ ಬಂದ್ ಹಿನ್ನೆಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಕರವೇ ಕಾರ್ಯಕರ್ತರು ಯತ್ನಿಸಿದರು. ಬೆಳ್ಳಂಬೆಳಗ್ಗೆ ಏರ್​​ಪೋರ್ಟ್​ಗೆ ಮುತ್ತಿಗೆ ಹಾಕಲು ಯತ್ನಿಸಿದ ಕರವೇಯ 12 ಕಾರ್ಯಕರ್ತರನ್ನು ಏರ್​ಪೋರ್ಟ್​​ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳ್ಳಂಬೆಳಗ್ಗೆ ಏರ್​ಪೋರ್ಟ್​​ಗೆ ಒಳಗೆ ನುಗ್ಗಲು ಯತ್ನಿಸಿದ ಕರವೇ ಕಾರ್ಯಕರ್ತರು ಪೊಲೀಸರ ವಶಕ್ಕೆ

ಏರ್​ಪೋರ್ಟ್​ನಲ್ಲಿ ಕರವೇ ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆ ಬೋರ್ಡಿಂಗ್ ಪಾಸ್ ಉಳ್ಳವರಿಗೆ ಮಾತ್ರ ವಿಮಾನ ನಿಲ್ದಾಣದೊಳಕ್ಕೆ ಬಿಡಲಾಗುತ್ತಿದೆ. ಏರ್​ಪೋರ್ಟ್ ಪ್ರವೇಶ ದ್ವಾರದಲ್ಲಿಯೇ ತಪಾಸಣೆ ನಡೆಸಲಾಗುತ್ತಿದೆ. ಒಂದು ಬೋರ್ಡಿಂಗ್ ಪಾಸ್ ಇದ್ದರೆ ಒಬ್ಬರಿಗೆ ಮಾತ್ರ ಪ್ರವೇಶಕ್ಕೆ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದು, ತೀವ್ರ ತಪಾಸಣೆ ನಡೆಸುತ್ತಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮಾಧ್ಯಮಗಳ ನಿರ್ಬಂಧ: ಕರ್ನಾಟಕ ಬಂದ್ ಹಿನ್ನೆಲೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಒಳಗಡೆ ಪೊಲೀಸರು ಮಾಧ್ಯಮ ಪ್ರತಿನಿಧಿಗಳನ್ನು ಸಹ ಬಿಡುತ್ತಿಲ್ಲ. ಈಶಾನ್ಯ ವಿಭಾಗದ ಡಿಸಿಪಿ ಸಿ.ಕೆ. ಬಾಬಾ ಅವರು ಮಾಧ್ಯಮ ಪ್ರತಿನಿಧಿಗಳನ್ನು ಒಳಗೆ ಬಿಡದಂತೆ ಪೊಲೀಸರಿಗೆ ಆದೇಶ ನೀಡಿದ್ದಾರೆ. ವಿಮಾನ ನಿಲ್ದಾಣದ ಒಳಗಡೆ ತೆರಳುವ ಫ್ಲೈಓವರ್​ನಲ್ಲೇ ಮಾಧ್ಯಮ ಪ್ರತಿನಿಧಿಗಳನ್ನು ತಡೆ ಹಿಡಿಯಲಾಗುತ್ತಿದೆ.

ABOUT THE AUTHOR

...view details