ಕರ್ನಾಟಕ

karnataka

ETV Bharat / state

ವಿಧಾನಸಭೆಯಲ್ಲಿ ನಾಲ್ಕು ವಿಧೇಯಕಗಳಿಗೆ ಅಂಗೀಕಾರ - ಈಟಿವಿ ಭಾರತ ಕನ್ನಡ

2022ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವಾ ತೆರಿಗೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ ಸೇರಿದಂತೆ ನಾಲ್ಕು ವಿಧೇಯಕಗಳಿಗೆ ವಿಧಾನಸಭೆಯಲ್ಲಿ ಇಂದು ಅಂಗೀಕಾರ ದೊರೆತಿದೆ.

karnataka-assembly-passed-four-bills
ವಿಧಾನಸಭೆಯಲ್ಲಿ ನಾಲ್ಕು ವಿಧೇಯಕಗಳಿಗೆ ಅಂಗೀಕಾರ

By

Published : Sep 20, 2022, 4:14 PM IST

ಬೆಂಗಳೂರು : 2022 ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವಾ ತೆರಿಗೆ (ತಿದ್ದುಪಡಿ ವಿಧೇಯಕ) ಸೇರಿದಂತೆ ನಾಲ್ಕು ಪ್ರಮುಖ ವಿಧೇಯಕಗಳಿಗೆ ವಿಧಾನಸಭೆಯಲ್ಲಿ ಇಂದು ಅಂಗೀಕಾರ ದೊರೆತಿದೆ. 2022ನೇ ಸಾಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ತಿದ್ದುಪಡಿ ವಿಧೇಯಕ), 2022ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಎರಡನೇ ತಿದ್ದುಪಡಿ ವಿಧೇಯಕ)ವನ್ನು ಮುಖ್ಯಮಂತ್ರಿಗಳ ಪರವಾಗಿ ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಮಂಡಿಸಿದರು.

ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜ್ ಅವರು ಕರ್ನಾಟಕ ಮುನ್ಸಿಪಾಲಿಟಿ ಕಾಯ್ದೆ (ತಿದ್ದುಪಡಿ)ಯನ್ನು ಮಂಡಿಸಿದರು. ಈ ಎಲ್ಲ ವಿಧೇಯಕಗಳ ಬಗ್ಗೆ ಸದನದಲ್ಲಿ ಸುದೀರ್ಘ ಚರ್ಚೆ ನಡೆದು ನಂತರ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧೇಯಕಗಳನ್ನು ಅಂಗೀಕರಿಸಿದರು. ಕಂದಾಯ ಸಚಿವ ಆರ್.ಅಶೋಕ್ ಅವರು ಸದನದಲ್ಲಿ ಹಾಜರಿರದ ಕಾರಣ ಕರ್ನಾಟಕ ಭೂ ಕಬಳಿಕೆ ನಿಯಂತ್ರಣ (ತಿದ್ದುಪಡಿ ವಿಧೇಯಕ) ಅಂಗೀಕಾರಗೊಂಡಿಲ್ಲ.

ಇದನ್ನೂ ಓದಿ :ಶ್ರೀಮಂತ ಬಡವರೇ ಇರಲಿ ಒತ್ತುವರಿ ತೆರವು ನಿಶ್ಚಿತ: ಸಚಿವ ಅಶೋಕ್

ABOUT THE AUTHOR

...view details