ಕರ್ನಾಟಕ

karnataka

ETV Bharat / state

ಮುಂದಿನ ಶುಕ್ರವಾರ ಶಾಸಕಾಂಗ ಸಭೆ ಕರೆದು ಪ್ರತಿಪಕ್ಷ ನಾಯಕನ ಆಯ್ಕೆ: ರಾಜ್ಯಾಧ್ಯಕ್ಷ ವಿಜಯೇಂದ್ರ - ಪ್ರತಿಪಕ್ಷ ನಾಯಕನ ಆಯ್ಕೆ

ಮುಂದಿನ ಶುಕ್ರವಾರ ಶಾಸಕಾಂಗ ಸಭೆ ಕರೆದು ಪ್ರತಿಪಕ್ಷ ನಾಯಕರನ್ನು ಆಯ್ಕೆ ಮಾಡಲಿದ್ದೇವೆ ಎಂದು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

Karnataka BJp new president BY Vijayendra statement
ಬಿ ವೈ ವಿಜಯೇಂದ್ರ

By ETV Bharat Karnataka Team

Published : Nov 10, 2023, 8:15 PM IST

Updated : Nov 10, 2023, 10:41 PM IST

ಮುಂದಿನ ಶುಕ್ರವಾರ ಶಾಸಂಕಾಂಗ ಸಭೆ ಕರೆದು ಪ್ರತಿಪಕ್ಷ ನಾಯಕನ ಆಯ್ಕೆ: ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು:ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕಗೊಂಡಿದ್ದಾರೆ. ಈ ವೇಳೆ, ಮಾಧ್ಯಮದೊಂದಿಗೆ ಸಂತಸ ಹಂಚಿಕೊಂಡ ಅವರು, ರಾಜ್ಯಾಧ್ಯಕ್ಷ ಹುದ್ದೆ ಅಲಂಕರಿಸಿದ ದಿನವೇ, ಪ್ರತಿಪಕ್ಷ ನಾಯಕರ ಆಯ್ಕೆಯ ದಿನಾಂಕದ ಬಗ್ಗೆ ಘೋಷಿಸಿದ್ದಾರೆ. ಮುಂದಿನ ಶುಕ್ರವಾರ ಶಾಸಕಾಂಗ ಸಭೆ ಕರೆದು ಅಭಿಪ್ರಾಯ ಪಡೆದು ಪ್ರತಿಪಕ್ಷ ನಾಯಕರನ್ನು ಆಯ್ಕೆ ಮಾಡಲಾಗುತ್ತದೆ. ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡುವುದಕ್ಕಾಗಿ ಕೇಂದ್ರದಿಂದ ವೀಕ್ಷಕರು ಆಗಮಿಸಲಿದ್ದು, ಅವರ ನೇತೃತ್ವದಲ್ಲೇ ಎಲ್ಲ ಶಾಸಕರ ಅಭಿಪ್ರಾಯ ಪಡೆದು, ಅವರ ಎದುರಲ್ಲೇ ಹೆಸರು ಘೋಷಣೆ ಆಗಲಿದೆ ಎಂದು ತಿಳಿಸಿದ್ದಾರೆ.

ನೂತನ ರಾಜ್ಯಾಧ್ಯಕ್ಷರ ಹೆಸರು ಪ್ರಕಟಗೊಳ್ಳುತ್ತಿದ್ದಂತೆ ಯಡಿಯೂರಪ್ಪ ನಿವಾಸ ಧವಳಗಿರಿಗೆ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಯಡಿಯೂರಪ್ಪ ಅವರಿಂದ ಆಶೀರ್ವಾದ ಪಡೆದುಕೊಂಡು ಪರಸ್ಪರ ಸಿಹಿ ಹಂಚಿಕೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಅಮಿತ್ ಶಾ, ಬಿ.ಎಲ್.ಸಂತೋಷ್ ಎಲ್ಲರೂ ಚರ್ಚಿಸಿ ಬಿಜೆಪಿ ರಾಜ್ಯಾಧ್ಯಕ್ಷನಾಗಿ ತಮ್ಮನ್ನು ಆಯ್ಕೆ ಮಾಡಿದ್ದಕ್ಕಾಗಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.

"ರಾಜ್ಯದಲ್ಲಿ ಯಡಿಯೂರಪ್ಪ ಆದಿಯಾಗಿ ಅನೇಕ ಹಿರಿಯರ ಶ್ರಮ ಇದೆ. ಲಕ್ಷಾಂತರ ಕಾರ್ಯಕರ್ತರ ಪರಿಶ್ರಮದಿಂದ ಬಿಜೆಪಿ ಇಷ್ಟು ಎತ್ತರಕ್ಕೆ ಬೆಳೆದು ನಿಂತಿದೆ. ಕೇಂದ್ರದ ವರಿಷ್ಠರು ನನ್ನ ಮೇಲೆ ಇಟ್ಟಿರುವ ಭರವಸೆ ವಿಶ್ವಾಸ, ಪಕ್ಷದ ನಾಯಕರ ವಿಶ್ವಾಸ ಮಾರ್ಗದರ್ಶನದಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿ ಗಟ್ಟಿಗೊಳಿಸುವ ಕೆಲಸ ಮಾಡುತ್ತೇನೆ. ನಮ್ಮ ಮುಂದಿನ ಗುರಿ ಮುಂದಿನ ಲೋಕಸಭಾ ಚುನಾವಣೆ. ಇಡಿ ಜಗತ್ತು ಭಾರತದ ಕಡೆ ನೋಡುತ್ತಿದೆ. ಮೋದಿ ನಾಯಕತ್ವದ ಮೇಲೆ ಭರವಸೆ ಇಟ್ಟಿದೆ. ಇಂತಹ ಸಂದರ್ಭದಲ್ಲಿ ಪಕ್ಷ ಸಂಘಟನೆ ಮೂಲಕ ಮುಂದಿನ ಚುನಾವಣೆಯಲ್ಲಿ ರಾಜ್ಯದಿಂದ ಅತಿ ಹೆಚ್ಚು ಸಂಸದರನ್ನು ಗೆಲ್ಲಿಸುವುದರ ಮೂಲಕ ಮೋದಿ ಕೈ ಬಲಪಡಿಸುವಲ್ಲಿ ನಾವು ಯಶಸ್ವಿಯಾಗುತ್ತೇವೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ:ಪುತ್ರನಿಗೆ ಬಿಜೆಪಿ ಸಾರಥ್ಯ ಕೊಡಿಸುವಲ್ಲಿ ಯಡಿಯೂರಪ್ಪ ಸಫಲ: ಯುವ ನಾಯಕತ್ವಕ್ಕೆ ಹೈಕಮಾಂಡ್ ಮಣೆ

"ವರಿಷ್ಠರೆಲ್ಲರೂ ಸೇರಿ ಸಮಾಲೋಚನೆ ನಡೆಸಿ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ. ರಾಜ್ಯ ಬಿಜೆಪಿಯ ಎಲ್ಲ ನಾಯಕರನ್ನು ವಿಶ್ವಾಸದಿಂದ ತೆಗೆದುಕೊಂಡು ಸಂಘಟನೆ ಮಾಡಲು ಅವಕಾಶ ನೀಡಿದ್ದಾರೆ. ಅದರಂತೆ ರಾಜ್ಯ ಪ್ರವಾಸ ಮಾಡಲಿದ್ದೇನೆ. ನಮ್ಮ ಮುಂದೆ ಲೋಕಸಭಾ ಚುನಾವಣೆ ಎನ್ನುವ ದೊಡ್ಡ ಸವಾಲಿದೆ. ಏನೇ ಸವಾಲಿದ್ದರೂ ಮೋದಿ ನಾಯಕತ್ವದ ಬಗ್ಗೆ ಜನತೆ ವಿಶ್ವಾಸ ಇರಿಸಿಕೊಂಡಿದ್ದಾರೆ. ಹಾಗಾಗಿ ನಮ್ಮ ಮೊದಲ ಆದ್ಯತೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸುವುದಾಗಿದೆ. ಅದರಲ್ಲಿ ಸಫಲರಾಗುತ್ತೇವೆ" ಎಂದು ಹೇಳಿದರು.

"ಯಡಿಯೂರಪ್ಪ ಪುತ್ರ ಎನ್ನುವ ಮಾತ್ರಕ್ಕೆ ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿಲ್ಲ. ಆದರೆ ಯಡಿಯೂರಪ್ಪ ಮಗ ಎನ್ನುವುದಕ್ಕೆ ನನಗೆ ಹೆಮ್ಮೆ ಇದೆ. ಯಡಿಯೂರಪ್ಪ ಮಗ ಎನ್ನುವ ಒಂದೇ ಕಾರಣಕ್ಕೆ ಅವಕಾಶ ಸಿಕ್ಕಿಲ್ಲ. ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಹಿರಿಯ ನಾಯಕರಾದ ಬಸವರಾಜ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲ್, ಆರ್ ಅಶೋಕ್, ಬಸನಗೌಡ ಪಾಟೀಲ್ ಯತ್ನಾಳ್, ಸೋಮಣ್ಣ ಸೇರಿದಂತೆ ಎಲ್ಲ ಹಿರಿಯರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಮಾಡುತ್ತೇನೆ. ದೊಡ್ಡ ಜವಾಬ್ದಾರಿಯನ್ನು ರಾಷ್ಟ್ರೀಯ ನಾಯಕರು ನನ್ನ ಹೆಗಲ ಮೇಲಿಟ್ಟಿದ್ದಾರೆ. ಸೋಮಣ್ಣ ಆದಿಯಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ. ವೈಯಕ್ತಿಕವೇನಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದೇ ಮುಂದುವರೆಯಲಿದ್ದೇನೆ" ಎಂದರು.

"ಪ್ರತಿಪಕ್ಷ ನಾಯಕರ ಆಯ್ಕೆ ವಿಚಾರ ಕುರಿತು ವರಿಷ್ಠರ ಜೊತೆ ಚರ್ಚಿಸಿದ್ದೇನೆ. ನಡ್ಡಾ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದೇನೆ. ಶುಕ್ರವಾರ ಶಾಸಕಾಂಗ ಸಭೆ ಕರೆದು ಎಲ್ಲ ಶಾಸಕರ ಅಭಿಪ್ರಾಯ ಪಡೆಯಲಾಗುತ್ತದೆ. ಅದಕ್ಕಾಗಿ ಕೇಂದ್ರದಿಂದ ವೀಕ್ಷಕರು ಬರಲಿದ್ದಾರೆ. ಅಂದು ಎಲ್ಲರ ಅಭಿಪ್ರಾಯ ಪಡೆದು ಮುಂದಿನ ಶುಕ್ರವಾರವೇ ಪ್ರತಿಪಕ್ಷ ನಾಯಕ ಯಾರು ಎಂದು ತೀರ್ಮಾನಿಸಲಾಗುತ್ತದೆ" ಎಂದು ತಿಳಿಸಿದರು.

ಪಕ್ಷ ಬೀಡೊ ಯೋಚನೆಯಲ್ಲಿ ಇರೋರನ್ನು ಒಟ್ಟಿಗೆ ಜೊತೆಯಾಗಿ ಕರೆದುಕೊಂಡು ಹೋಗುತ್ತೇನೆ. ಯಾರೂ ಪಕ್ಷ ಬಿಡಲ್ಲ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತೇನೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ:ವಿಜಯೇಂದ್ರ ಕರ್ನಾಟಕ ಬಿಜೆಪಿಯ ನೂತನ ಸಾರಥಿ: ಮೋದಿ, ಶಾ, ಸಂತೋಷ್​ಗೆ ಧನ್ಯವಾದ ಹೇಳಿದ BYV​​​​​​

Last Updated : Nov 10, 2023, 10:41 PM IST

ABOUT THE AUTHOR

...view details