ಬೆಂಗಳೂರು:ಕೇಂದ್ರ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿಯವರ ಕನಸಿನ ಕೂಸಾಗಿದ್ದ, ಬಹು ನಿರೀಕ್ಷಿತ ಧಾರವಾಡ-ಬೆಳಗಾವಿ ನೇರ ರೈಲು ಮಾರ್ಗ ನಿರ್ಮಾಣಕ್ಕಾಗಿ ಬಜೆಟ್ನಲ್ಲಿ ಅನುದಾನ ಘೋಷಣೆಯಾಗಿದೆ.
ರೈಲ್ವೆ ಯೋಜನೆಗಳಿಗೆ 3,991 ಕೋಟಿ ರೂಪಾಯಿ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನಕ್ಕಾಗಿ 2,260 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಧಾರವಾಡ-ಕಿತ್ತೂರು-ಬೆಳಗಾವಿ 73 ಕಿಲೋ ಮೀಟರ್ ಉದ್ದದ ರೈಲ್ವೆ ಯೋಜನೆಗೆ 923 ಕೋಟಿ ರೂ. ಮೀಸಲಿಟ್ಟಿದ್ದಾರೆ.
ಇದನ್ನೂ ಓದಿ: ಕನ್ನಡ ಭಾಷೆ ಅಭಿವೃದ್ಧಿ, ಡಿಜಿಟಲೀಕರಣಕ್ಕೆ 2 ಕೋಟಿ ರೂ.ಯೋಜನೆ
ಈ ಯೋಜನೆಯ ಭೂಸ್ವಾಧೀನದ ಸಂಪೂರ್ಣ ಜವಾಬ್ದಾರಿಯನ್ನು ರಾಜ್ಯ ಹೊತ್ತುಕೊಂಡಿರುವುದಾಗಿ ತಿಳಿಸಿದ್ದು, ಶೀಘ್ರವೇ ಈ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದಿದ್ದಾರೆ.
ರಾಜ್ಯದಲ್ಲಿ ಒಟ್ಟು 1,173 ಉದ್ದದ ರೈಲ್ವೆ ಮಾರ್ಗ ವಿಸ್ತರಣೆಗಾಗಿ ಒಟ್ಟು 7 ರೈಲ್ವೆ ಯೋಜನೆ ಹಾಕಿಕೊಳ್ಳಲಾಗಿದೆ. ಇದರ ಜತೆಗೆ ರಾಜ್ಯದ ಉಪನಗರ ರೈಲು ಯೋಜನೆಗಳಿಗೆ 850 ಕೋಟಿ ರೂ. ಅನುದಾನ ಘೋಷಣೆಯಾಗಿದೆ. ಉಳಿದಂತೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 384 ಕೋಟಿ ರೂ., ಹಾಸನ ವಿಮಾನ ನಿಲ್ದಾಣಕ್ಕೆ 175 ಕೋಟಿ ರೂ., ವಿಜಯಪುರ ವಿಮಾನ ನಿಲ್ದಾಣಕ್ಕೆ 220 ಕೋಟಿ ರೂ. ಅನುದಾನ ನೀಡಿದ್ದಾರೆ.