ಕರ್ನಾಟಕ

karnataka

ETV Bharat / state

ಬಜೆಟ್: UPSC ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್​ಲೈನ್ ಕೋಚಿಂಗ್

2022-23ನೇ ಸಾಲಿನ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಾತ್ಮಕ ಪರೀಕ್ಷಾ ಅಭ್ಯರ್ಥಿಗಳಿಗೆ ಗುಡ್​ನ್ಯೂಸ್ ನೀಡಿದ್ದಾರೆ.

Karnataka Budget 2022
Karnataka Budget 2022

By

Published : Mar 4, 2022, 2:53 PM IST

ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದು, ವಿದ್ಯಾರ್ಥಿಗಳಿಗೆ ವಿಶೇಷ ಉಡುಗೊರೆ ನೀಡಿದ್ದಾರೆ. ಕೆಪಿಎಸ್​​ಸಿ, ಯುಪಿಎಸ್​​ಸಿ, ಎಸ್​ಎಸ್​​ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಉಚಿತವಾಗಿ ಆನ್​ಲೈನ್​ ಕೋಚಿಂಗ್​ ನೀಡಲಾಗುವುದು ಎಂದು ಘೋಷಿಸಿದರು.

ಬಜೆಟ್ ಮಂಡನೆ ವೇಳೆ ಮಾಹಿತಿ ನೀಡಿರುವ ಸಿಎಂ ರಾಜ್ಯದಲ್ಲಿ ಬ್ಯಾಂಕಿಂಗ್​, ರೈಲ್ವೇ, ಸಿಡಿಎಸ್​, ನೀಟ್​, ಜೆಇಇ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ರಾಜ್ಯ ಸರ್ಕಾರದಿಂದ ಉಚಿತವಾಗಿ ಆನ್​ಲೈನ್​ ಕೋಚಿಂಗ್​ ನೀಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ:ಬಜೆಟ್: ರಾಜಧಾನಿ ಬೆಂಗಳೂರು ಮೇಲೆ ಸಿಎಂ ಬೊಮ್ಮಾಯಿ ಕೃಪಾಕಟಾಕ್ಷ

ವಿದ್ಯಾರ್ಥಿ ಮಾರ್ಗದರ್ಶಿನಿ ಎಂಬ ಹೊಸ ಯೋಜನೆಯಡಿ ರಾಜ್ಯದ ವಿದ್ಯಾರ್ಥಿಗಳಿಗೆ ಆನ್​ಲೈನ್ ಮೂಲಕ ಉಚಿತ ಕೋಚಿಂಗ್​ ನೀಡುವುದಾಗಿ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಪ್ರಮುಖವಾಗಿ ರಾಜ್ಯದ ಪ್ರತಿವೊಂದು ತಾಲೂಕುಗಳಲ್ಲಿ ನೀಟ್ ಪರೀಕ್ಷೆಗೆ ತರಬೇತಿ ನೀಡುವುದಾಗಿ ತಿಳಿಸಿದ್ದಾರೆ.

ABOUT THE AUTHOR

...view details