ಕರ್ನಾಟಕ

karnataka

ETV Bharat / state

Karnataka Budget: ಗೃಹಲಕ್ಷ್ಮಿ ಯೋಜನೆಗೆ ವಾರ್ಷಿಕ 30,000 ಕೋಟಿ ರೂಪಾಯಿ ವೆಚ್ಚ

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 14ನೇ ಬಜೆಟ್​ ಮಂಡಿಸಿದ್ದು, ಮಹಿಳಾ ಮತ್ತು ಕಲ್ಯಾಣ ಇಲಾಖೆಗೆ ದಕ್ಕಿದ್ದೇನು ನೋಡೋಣ.

Karnataka budget 2023
ಮಹಿಳೆ

By

Published : Jul 7, 2023, 2:17 PM IST

Updated : Jul 7, 2023, 2:30 PM IST

ಬೆಂಗಳೂರು:ಕಾಂಗ್ರೆಸ್​ ಸರ್ಕಾರವು ಅಧಿಕಾರಕ್ಕೆ ಬರುವ ಮೊದಲು ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಅದರಂತೆ ಗೃಹಲಕ್ಷ್ಮಿ ಯೋಜನೆ, ಶಕ್ತಿ ಯೋಜನೆಯನ್ನು ಮಹಿಳಾ ಪ್ರಧಾನವಾಗಿ ನೀಡಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್​ನಲ್ಲಿಯೂ ಮಹಿಳಾ ಸಬಲೀಕರಣಕ್ಕಾಗಿ ಕೆಲವೊಂದು ಮಹತ್ತರ ನಿರ್ಧಾರ ಪ್ರಕಟಿಸಿದ್ದಾರೆ. ಮಹಿಳಾ ಮತ್ತು ಕಲ್ಯಾಣ ಇಲಾಖೆಗೆ 232 ಕೋಟಿ ರೂ. ಮೀಸಲಿಡಲಾಗಿದೆ.

'ನನ್ನವ್ವ ಬದುಕಿದ್ದು, ಕಾಳುಕಡ್ಡಿಗೆ, ದುಡಿತಕ್ಕೆ, ಮಕ್ಕಳಿಗೆ; ಮೇಲೊಂದು ಸೂರು, ಅನ್ನ, ರೊಟ್ಟಿ, ಹಚ್ಚಡಕ್ಕೆ; ಸರೀಕರ ಎದುರು ತಲೆಯೆತ್ತಿ ನಡೆಯಲಿಕ್ಕೆ' ಎಂಬ ಪಿ.ಲಂಕೇಶ್​ ಅವರ ಮಾತನ್ನು ಇದೇ ವೇಳೆ ಉಲ್ಲೇಖಿಸಿದರು.

  • ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರ ಖಾತೆಗೆ ನೇರವಾಗಿ ಮಾಸಿಕ 2 ವರ್ಗಾಯಿಸಲಾಗುವುದು. ಈ ಯೋಜನೆಗಾಗಿ ವಾರ್ಷಿಕವಾಗಿ ಸುಮಾರು 30,000 ಕೋಟಿ ವೆಚ್ಚವಾಗಲಿದೆ.
    ಬಜೆಟ್​ನಲ್ಲಿ ಮಹಿಳಾ ಮತ್ತು ಕಲ್ಯಾಣ ಇಲಾಖೆಗೆ 232 ಕೋಟಿ ರೂ. ಮೀಸಲು
  • ವಿಕಲಚೇತನರಿಗಾಗಿ ಆರ್ಥಿಕವಾಗಿ ಸಾಮಾಜಿಕವಾಗಿ ಸದೃಢತೆಯನ್ನು ಒದಗಿಸಲು ಇಲಾಖೆಯಲ್ಲಿ ನೋಂದಣಿಯಾಗಿರುವ ಸುಮಾರು ನಾಲ್ಕು ಸಾವಿರ ವಿಶೇಷ ಚೇತನರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನಗಳನ್ನು 30 ಕೋಟಿ ರೂ ವೆಚ್ಚದಲ್ಲಿ ಒದಗಿಸಲಾಗುವುದು.
  • ಮಹಿಳಾ ಉದ್ಯಮಿಗಳು ಆತಿತ್ಯ ಆರೈಕೆ ಮತ್ತು ಪ್ರವಾಸೋದ್ಯಮದಂತ ಸೇವಾ ವಲಯದಲ್ಲಿ ಹೆಚ್ಚಿನ ಅವಕಾಶ ಪಡೆಯುತ್ತಿದ್ದು ರಾಜ್ಯ ಹಣಕಾಸು ಸಂಸ್ಥೆ ಮೂಲಕ ಶೇಕಡ ನಾಲ್ಕರ ಬಡ್ಡಿ ದರದಲ್ಲಿ ನೀಡಲಾಗುವ ಸಾಲದ ಮಿತಿಯನ್ನು ಎರಡು ಕೋಟಿ ರೂಗಳಿಂದ 5 ಕೋಟಿ ರೂ.ಗಳಿಗೆ ವಿಸ್ತರಣೆ ಮಾಡಲಾಗುವುದು.
  • 2023- 24ನೇ ಸಾಲಿನಲ್ಲಿ 10 ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲೆಯನ್ನು ಏಳು ಜಿಲ್ಲೆಗಳಲ್ಲಿ ಎನ್​ಜಿಒ ಸಹಾಯದೊಂದಿಗೆ ಎರಡು ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.
  • ರಾಜ್ಯದಲ್ಲಿನ ಆಸಿಡ್​ ದಾಳಿ ಸಂತ್ರಸ್ತರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಇವರಿಗೆ ಸ್ವಯಂ ಉದ್ಯೋಗಕ್ಕಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಐದು ಲಕ್ಷ ರೂ.ಗಳವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ಒದಗಿಸಲು ಎರಡು ಕೋಟಿ ರೂ. ಅನುದಾನ ಮತ್ತು ರಾಜೀವ್​ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯವನ್ನು ಒದಗಿಸಲಾಗುವುದು.
  • ಪ್ರಸಕ್ತ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 70,427 ಕೋಟಿ ರೂ. ಆಯವ್ಯಯ ನಿಗದಿಪಡಿಸಲಾಗಿದೆ.
  • ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2023- 24 ನೇ ಸಾಲಿನಲ್ಲಿ 51,229 ಕೋಟಿ ರೂ. ಅನುದಾನ ಒದಗಿಸಲಾಗಿದೆ.
  • ನವಜಾತ ಶಿಶು, ಮಕ್ಕಳು, ಮಹಿಳೆಯರಲ್ಲಿ ರಕ್ತಹೀನತೆ, ಅಪೌಷ್ಟಿಕತೆ ನಿವಾರಿಸಲು ಸಮಗ್ರ ಪರೀಕ್ಷೆ, ಚಿಕಿತ್ಸೆ ಅರಿವು ಮೂಡಿಸಲು 25 ಕೋಟಿ ರೂ. ಅನುದಾನ ನೀಡಲಾಗುವುದು.
  • ಮಹಿಳೆಯರ ಸುರಕ್ಷತೆಗಾಗಿ‌ ಹೊಸದಾಗಿ 5 ಕಾನೂನು ಸುವ್ಯವಸ್ಥೆ ಪೊಲೀಸ್ ಠಾಣೆ ಮತ್ತು 6 ಸಂಚಾರ ಮಹಿಳಾ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗುವುದು.

ಇದನ್ನೂ ಓದಿ:Karnataka Budget: ರಾಷ್ಟ್ರೀಯ ಶಿಕ್ಷಣ ನೀತಿಗೆ ಕೊಕ್; 10ನೇ ತರಗತಿವರೆಗೂ ಮಕ್ಕಳಿಗೆ ಮೊಟ್ಟೆ/ ಬಾಳೆಹಣ್ಣು ವಿತರಣೆ

Last Updated : Jul 7, 2023, 2:30 PM IST

ABOUT THE AUTHOR

...view details