ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಎರಡನೇ ಆರ್ಥಿಕ ಮುಂಗಡ ಪತ್ರ ಮಂಡನೆ ಮಾಡುತ್ತಿದ್ದು, ಮಹಿಳಾ ಸಬಲೀಕರಣದ ಉದ್ದೇಶದಿಂದ ಹಲವಾರು ಘೋಷಣೆಗಳನ್ನು ಮಾಡಿದ್ದಾರೆ. ಶೂನ್ಯ ಬಡ್ಡಿದರದಲ್ಲಿ ಮಹಿಳೆಯರಿಗೆ ಸಾಲ ಸೌಲಭ್ಯ ಯೋಜನೆ ಘೋಷಣೆ ಮಾಡಲಾಗಿದೆ.
ಗೃಹಿಣಿ ಶಕ್ತಿ ಯೋಜನೆ:"ಗೃಹಿಣಿ ಶಕ್ತಿ ಯೋಜನೆ"ಯಲ್ಲಿ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಮಾಸಿಕ 500 ರೂ.ಸಹಾಯಧನ ನೀಡುವ ಬಗ್ಗೆ ತಿಳಿಸಲಾಗಿದೆ. ಈ ಹಿಂದೆ ಚುನಾವಣಾ ಪ್ರಚಾರದ ವೇಳೆ ಈ ಬಗ್ಗೆ ರಾಜ್ಯ ಸರ್ಕಾರ ಆಶ್ವಾಸನೆ ನೀಡಿತ್ತು. ಆ‍್ಯಸಿಡ್ ದಾಳಿ ಸಂತ್ರಸ್ಥರಿಗೆ ಮಾಶಾಸನ 10,000ಕ್ಕೆ ಏರಿಕೆ ಮಾಡಲಾಗಿದೆ.
ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ:ಸಹಾಧನದ ಹೆಚ್ಚಿನ ಬೇಕು ಎಂದು ಹೋರಾಟ ಮಾಡುತ್ತಿದ್ದಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ್ದು, ಸಹಾಯಧನ 1000 ರೂ. ನಿಂದ 1500 ರೂ.ಗೆ ಏರಿಕೆ ಮಾಡಲಾಗಿದೆ.
She Toilet:ಜನನಿಬಿಡ ಪ್ರದೇಶಗಳಲ್ಲಿ ಮಹಿಳೆಯರ ಅನುಕೂಲಕ್ಕಾಗಿ 250 ಸುಸಜ್ಜಿತ ‘She Toilet’ ನಿರ್ಮಾಣ. ಶೌಚಾಲಯಗಳು, ಫೀಡಿಂಗ್ ರೂಂಗಳು, ಮೊಬೈಲ್ ಚಾರ್ಜಿಂಗ್, ತುರ್ತು SOS ಸೌಲಭ್ಯಗಳು ಇತ್ಯಾದಿಯನ್ನು ಆಧುನಿಕ ವಿನ್ಯಾಸದೊಂದಿಗೆ 50 ಕೋಟಿ ರೂ. ಗಳಲ್ಲಿ ನಿರ್ಮಾಣಕ್ಕೆ 2023- 24 ಬಜೆಟ್ನಲ್ಲಿ ಘೊಷಿಸಲಾಗಿದೆ.
ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್:ಅಸಂಘಟಿತ ವಲಯದ ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಯೋಜನೆ ಘೋಷಿಸಿದ್ದು ಇದಕ್ಕೆನ 1000 ಕೋಟಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಬಜೆಟ್ನಲ್ಲಿ ತಿಳಿಸಲಾಗಿದೆ.