ಕರ್ನಾಟಕ

karnataka

ETV Bharat / state

ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್: 10+3 ಶಾಸಕರಿಗೆ ಸಚಿವ ಸ್ಥಾನ ಖಚಿತ - 10+3 ಶಾಸಕರಿಗೆ ಸಚಿವ ಸ್ಥಾನ

ನೂತನವಾಗಿ ಗೆದ್ದ 10 ಶಾಸಕರು ಹಾಗೂ ಪಕ್ಷದಿಂದ ಮೂವರು ಶಾಸಕರು ಸೇರಿ ಒಟ್ಟು 13 ಶಾಸಕರು ಸಂಪುಟ ಸೇರ್ಪಡೆಯಾಗಲಿದ್ದಾರೆ ಎಂದು ಸಿಎಂ ಬಿ. ಎಸ್​. ಯಡಿಯೂರಪ್ಪ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ

By

Published : Feb 2, 2020, 12:23 PM IST

Updated : Feb 2, 2020, 12:51 PM IST

ಬೆಂಗಳೂರು: ಕೊನೆಗೂ ಸಂಪುಟ ವಿಸ್ತರಣೆಗೆ ಫೆಬ್ರವರಿ 6ಕ್ಕೆ ಮುಹೂರ್ತ ಫಿಕ್ಸ್ ಆಗಿದೆ.

ಈ ಬಗ್ಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ, ಫೆ.6ಕ್ಕೆ ಬೆಳಗ್ಗೆ 10.30ಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ಉಪ ಚುನಾವಣೆಯಲ್ಲಿ ಗೆದ್ದ 10 ಜನರಿಗೆ ಸಚಿವ ಸ್ಥಾನ ಕೊಡ್ತೇವೆ. ಈಗಾಗಲೇ ನಾನು ಈ ಬಗ್ಗೆ ಹೇಳಿದ್ದೇನೆ. 10 ಜನರು ನೂತನವಾಗಿ ಗೆದ್ದ ಶಾಸಕರು ಸಚಿವರಾಗಲಿದ್ದಾರೆ ಎಂದು ತಿಳಿಸಿದರು.

ನೂತನವಾಗಿ ಗೆದ್ದ 10 ಶಾಸಕರು ಹಾಗೂ ಪಕ್ಷದಿಂದ ಮೂವರು ಶಾಸಕರು ಸೇರಿ ಒಟ್ಟು 13 ಶಾಸಕರು ಸಂಪುಟ ಸೇರ್ಪಡೆಯಾಗಲಿದ್ದಾರೆ. ಬೆಳಗಾವಿ ಮತ್ತು ಬೆಂಗಳೂರಿಗೆ ಹೆಚ್ಚು ಸಚಿವ ಸ್ಥಾನ ನೀಡಬೇಕು ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅದು ಅನಿವಾರ್ಯ. ಆ 17 ಶಾಸಕರು ರಾಜೀನಾಮೆ ಕೊಟ್ಟಿಲ್ಲ ಅಂದಿದ್ರೆ, ನಾನು ಈ ಕುರ್ಚಿಯಲ್ಲಿ ಬಂದು ಕುಳಿತುಕೊಳ್ಳೋಕೆ ಆಗುತ್ತಿತ್ತಾ? ಎಂದು ಪ್ರಶ್ನೆ ಹಾಕಿದರು.

ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ

ನಾವು ಹಿಂದೆ ಏನು ಭರವಸೆ ಕೊಟ್ಟಿದ್ದೇವೋ ಅದನ್ನು ಈಡೇರಿಸುತ್ತೇವೆ. ಯಾವ ಶಾಸಕರಿಗೂ ಅನ್ಯಾಯ ಮಾಡುವುದಿಲ್ಲ ಎಂದ ಯಡಿಯೂರಪ್ಪ ಅವರು, ಆರ್ ಶಂಕರ್​ನ ಮುಂದಿನ ದಿನಗಳಲ್ಲಿ ಸಚಿವರನ್ನಾಗಿ ಮಾಡ್ತೇವೆ ಎಂದು ಸ್ಪಷ್ಟಪಡಿಸಿದರು. ಸೋತವರಿಗೆ ಸಚಿವ ಸ್ಥಾನ ನೀಡುವ ವಿಚಾರವಾಗಿ ಮಾತನಾಡಿದ ಸಿಎಂ, ಸುಪ್ರಿಂ ಕೋರ್ಟ್ ನಿರ್ದೇಶನದ ಪ್ರಕಾರ ಸೋತವರನ್ನು ಸಚಿವರನ್ನಾಗಿ ಮಾಡಲು ಬರಲ್ಲ. ಆದರೆ, ಮುಂದಿನ ದಿನಗಳಲ್ಲಿ ಈ ಬಗ್ಗೆ ನೋಡೋಣ ಎಂದ್ರು.

Last Updated : Feb 2, 2020, 12:51 PM IST

ABOUT THE AUTHOR

...view details