ಬೆಂಗಳೂರು :ವೃತ್ತಿ ಶಿಕ್ಷಣಕ್ಕೆ ಪ್ರವೇಶಾವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯನ್ನು ಈ ಬಾರಿ ಜೂನ್ 16, 17 ಮತ್ತು 18ರಂದು ನಡೆಸಲು ಉದ್ದೇಶಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಇಂತಹ ಪರೀಕ್ಷೆಗೆ ಗೊತ್ತುಪಡಿಸಿಕೊಂಡಿರುವ ಸಂಭವನೀಯ ದಿನಾಂಕಗಳ ಬಗ್ಗೆ ತಿಳಿದುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಪರೀಕ್ಷಾ ವೇಳಾಪಟ್ಟಿ :ಇದರಂತೆ ಜೂನ್ 16ರಂದು ಬೆಳಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ, 17ರಂದು ಬೆಳಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಹಾಗೂ 18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಸಿಇಟಿ ನಡೆಸಲು ಉದ್ದೇಶಿಸಲಾಗಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.