ಬೆಂಗಳೂರು: ಧೀಮಂತ ರಾಜಕಾರಣಿ, ಭಾರತದ ಮಾಜಿ ರಾಷ್ಟ್ರಪತಿ, ಭಾರತರತ್ನ ಪ್ರಣಬ್ ಮುಖರ್ಜಿ ವಿಧಿವಶರಾದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ಶ್ರೇಷ್ಠ ನೇತಾರರನ್ನು ಕಳೆದುಕೊಂಡ ಅನಾಥಪ್ರಜ್ಞೆ ಇಡೀ ದೇಶಕ್ಕೆ ಆವರಿಸಿದೆ. ಅವರೊಂದಿಗಿನ ಒಡನಾಟದ ಕ್ಷಣಗಳನ್ನು ನೆನೆಯುತ್ತಾ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಶ್ರುಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸಿದ್ದಾರೆ.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನ: ಅಶ್ರುಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ ಸಿಎಂ ಬಿಎಸ್ವೈ - ಕರ್ನಾಟಕ ಸಿಎಂ ಬಿಎಸ್ವೈ
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತೀವ್ರ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.
ಭಾರತ ರತ್ನ ಪ್ರಣಬ್ ಮುಖರ್ಜಿ ನಿಧನ... ಪ್ರಧಾನಿ ಮೋದಿ, ಶಾ ಸೇರಿ ಅನೇಕರಿಂದ ಕಂಬನಿ
ಪ್ರಣಬ್ರವರ ಸೇವೆ, ಸಾಧನೆಗಳು ಅನನ್ಯ. ದಶಕಗಳ ಕಾಲ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಪ್ರಧಾನ ಪಾತ್ರವಹಿಸಿ, ಯೋಜನಾ ಆಯೋಗದ ಉಪಾಧ್ಯಕ್ಷರಾಗಿ, ವಾಣಿಜ್ಯ, ವಿದೇಶಾಂಗ, ಹಣಕಾಸು, ರಕ್ಷಣಾ ಸಚಿವರಾಗಿ ಅವರು ಅವಿಸ್ಮರಣೀಯ ಸೇವೆ ಸಲ್ಲಿಸಿದ್ದರು. ರಾಷ್ಟ್ರಪತಿಗಳಾಗಿ ಅವರು ದೇಶದ ಗರಿಮೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದ್ದರು.ಪ್ರಣಬ್ ರಷ್ಟು ಸುದೀರ್ಘ ಕಾಲ ಆಡಳಿತದ ಕೇಂದ್ರ ಸ್ಥಾನದಲ್ಲಿದ್ದು, ಪ್ರಾಮಾಣಿಕವಾಗಿ, ಕಳಂಕರಹಿತರಾಗಿ ಸೇವೆ ಸಲ್ಲಿಸಿದ ಮತ್ತೋರ್ವ ಸರ್ವಾದರಣೀಯ ನಾಯಕ ಇರಲಾರರು. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ದಯಪಾಲಿಸಲಿ, ಕುಟುಂಬದವರಿಗೆ, ಅಭಿಮಾನಿಗಳಿಗೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
ಶ್ರೀ ಪ್ರಣಬ್ ರಷ್ಟು ಸುದೀರ್ಘ ಕಾಲ ಆಡಳಿತದ ಕೇಂದ್ರ ಸ್ಥಾನದಲ್ಲಿದ್ದು, ಪ್ರಾಮಾಣಿಕವಾಗಿ, ಕಳಂಕರಹಿತರಾಗಿ ಸೇವೆ ಸಲ್ಲಿಸಿದ ಮತ್ತೋರ್ವ ಸರ್ವಾದರಣೀಯ ನಾಯಕ ಇರಲಾರರು. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ದಯಪಾಲಿಸಲಿ, ಕುಟುಂಬದವರಿಗೆ, ಅಭಿಮಾನಿಗಳಿಗೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.