ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆ ಯತ್ನ ನಡೆಸಿದ್ದು, ತೀವ್ರ ಅಸ್ವಸ್ಥರಾದ ಹಿನ್ನಲೆಯಲ್ಲಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆ ಯತ್ನ..! - ಎನ್.ಆರ್ ಸಂತೋಷ್ ಆತ್ಮಹತ್ಯೆಗೆ ಯತ್ನ
ಶುಕ್ರವಾರ ಸಂಜೆ 7:30ರ ಸಮಯದಲ್ಲಿ ಸಂತೋಷ್ ತಮ್ಮ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಶುಕ್ರವಾರ ಸಂಜೆ 7:30ರ ಸಮಯದಲ್ಲಿ ತಮ್ಮ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಲಗಿದ್ದ ಅವರನ್ನು ಪತ್ನಿ ಜಾಹ್ನವಿ ಎಬ್ಬಿಸಲು ಪ್ರಯತ್ನಿಸಿದ ಸಂದರ್ಭದಲ್ಲಿ ಸಂತೋಷ್ ನಿದ್ದೆ ಮಾತ್ರೆ ಸೇವಿಸಿರುವುದು ಬೆಳಕಿಗೆ ಬಂದಿದೆ. ಸಂತೋಷ್ 12 ನಿದ್ದೆ ಮಾತ್ರೆ ಸೇವಿಸಿದ್ದಾರೆ ಎನ್ನಲಾಗಿದೆ. ಅವರನ್ನು ಕೂಡಲೇ ನಗರದ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಕಳೆದ ಕೆಲ ದಿನದಿಂದ ಮಾನಸಿಕ ಖಿನ್ನತೆಯಿಂದ ಸಂತೋಷ್ ಬಳಲುತ್ತಿದ್ದರು ಎನ್ನಲಾಗಿದೆ. ಆದರೆ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಂತೋಷ್ ಯಾವುದೇ ಪತ್ರವನ್ನು ಬರೆದಿಟ್ಟಿಲ್ಲ ಎಂದು ತಿಳಿದುಬಂದಿದೆ. ಈ ಕುರಿತು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.