ಬೆಂಗಳೂರು: ರಾಜ್ಯದಲ್ಲಿ ಇಂದು 23,452 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 648 ಮಂದಿಗೆ ಸೋಂಕು ದೃಢಪಟ್ಟಿದೆ. 532 ಮಂದಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಒಟ್ಟು 39,13,885 ಮಂದಿ ಗುಣಮುಖರಾಗಿದ್ದಾರೆ. ಇಂದು ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ.
ಸಕ್ರಿಯ ಪ್ರಕರಣಗಳು 3,997 ರಷ್ಟಿವೆ. ಸೋಂಕಿತರ ಪ್ರಮಾಣ ಶೇ.2.76 ರಷ್ಟಿದ್ದರೆ, ವಾರದ ಸೋಂಕಿತರ ಪ್ರಮಾಣ ಶೇ. 2.44 ರಷ್ಟಿದೆ. ಇಲ್ಲಿಯವರೆಗೂ ಪರೀಕ್ಷಿಸಲಾದ ಒಟ್ಟು ಸಂಖ್ಯೆ 66,6,62,873. ವಾರದ ಸಾವಿನ ಪ್ರಮಾಣ ಶೇ. 0.02 ಇದೆ.