ಬೆಂಗಳೂರು:ವಿಧಾನಪರಿಷತ್ ಚುನಾವಣಾ ಪ್ರಚಾರ ಕಣದಲ್ಲಿ ಇಂದಿನಿಂದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಕಾಣಿಸಿಕೊಳ್ಳಲಿದ್ದಾರೆ. ಕೋಲಾರ-ಚಿಕ್ಕಬಳ್ಳಾಪುರ ಕ್ಷೇತ್ರದ ಪಕ್ಷದ ಅಭ್ಯರ್ಥಿ ವಕ್ಕಲೇರಿ ರಾಮು ಪರವಾಗಿ ಅವರು ಮತಯಾಚನೆ ಮಾಡುವರು.
ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಬೆಳಗ್ಗೆ 11 ಗಂಟೆಗೆ ತೆರಳಲಿರುವ ದೇವೇಗೌಡರು, ಮಧ್ಯಾಹ್ನ 12.30ಕ್ಕೆ ಚಿಕ್ಕಬಳ್ಳಾಪುರ-ಶಿಡ್ಲಘಟ್ಟ ರಸ್ತೆಯಲ್ಲಿರುವ (ಹಂದಿಗನಾಳ ಗ್ರಾಮ) ಬಾಲಾಜಿ ಕನ್ವೆನ್ಷನ್ ಹಾಲ್ನಲ್ಲಿ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಜೊತೆ ಸಮಾಲೋಚನೆ ನಡೆಸುವರು.