ಬೆಂಗಳೂರು: ರಾಜ್ಯದಲ್ಲಿಂದು ಹೊಸದಾಗಿ 2,116 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 21 ಸೋಂಕಿತರ ಮಹಾಮಾರಿಗೆ ಜೀವ ತೆತ್ತಿದ್ದಾರೆ.
ಕೊರೊನಾ ಸೋಂಕು ತಗುಲಿದವರಿಗೆ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಳವಾಗಿದೆ. ಇಂದು 3,368 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 8,14,949 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯ ಇಳಿಕೆ; ಇಂದು 2,116 ಮಂದಿಗೆ ಸೋಂಕು - ಕೊರೊನಾ ವೈರಸ್
ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದ್ದು, ಇಂದು 2,116 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 21 ಸೋಂಕಿತರ ಮಹಾಮಾರಿಗೆ ಬಲಿಯಾಗಿದ್ದಾರೆ.
![ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯ ಇಳಿಕೆ; ಇಂದು 2,116 ಮಂದಿಗೆ ಸೋಂಕು Karnataka covid-19 report](https://etvbharatimages.akamaized.net/etvbharat/prod-images/768-512-9525549-thumbnail-3x2-covid.jpg)
ಸದ್ಯ 29,470 ಸಕ್ರಿಯ ಪ್ರಕರಣಗಳಿವೆ. ಈವರೆಗೆ ಒಟ್ಟು 814949 ಮಂದಿ ಬಿಡುಗಡೆಯಾಗಿದ್ದಾರೆ. ಕೋವಿಡ್ ಸೋಂಕಿತರ ಸಂಖ್ಯೆ 8,55,912 ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಸಂಖ್ಯೆ 11,474 ಕ್ಕೆ ಬಂದು ನಿಂತಿದೆ. ಇನ್ನು ಐಸಿಯುನಲ್ಲಿ 797 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಮಾಣ 1.83% ಇದ್ದು, 0.99% ಮರಣ ಪ್ರಮಾಣ ಇದೆ.
ಬೆಂಗಳೂರಿನಲ್ಲಿ ಒಟ್ಟು 1,069 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದ್ದು, 991 ಮಂದಿ ಗುಣಮುಖರಾಗಿದ್ದಾರೆ. 8 ಮಂದಿ ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆ 3,54,215ಕ್ಕೆ ಏರಿಕೆಯಾಗಿದ್ದು, 17,942 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.