ಬೆಂಗಳೂರು: ರಾಜ್ಯದಲ್ಲಿಂದು 600 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇಬ್ಬರು ಸೋಂಕಿತರು ಸಾವಿಗೀಡಾಗಿದ್ದಾರೆ. 28,046 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 600 ಮಂದಿಗೆ ಸೋಂಕು ದೃಢಪಟ್ಟಿದೆ. 589 ಮಂದಿ ವೈರಸ್‌ನಿಂದ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 5,212 ಸಕ್ರಿಯ ಪ್ರಕರಣಗಳಿವೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಶೇ.2.13, ವಾರದ ಸೋಂಕಿತರ ಪ್ರಮಾಣ ಶೇ.3.91ರಷ್ಟಿದೆ. ಈ ವಾರದ ಸಾವಿನ ಪ್ರಮಾಣ ಶೇ.0.24 ಇದೆ. ಬೆಂಗಳೂರಲ್ಲಿ ಇಂದು 312 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18,66,560ಕ್ಕೆ ಏರಿಕೆ ಆಗಿದೆ.