ಬೆಂಗಳೂರು: ರಾಜ್ಯದಲ್ಲಿಂದು 1,75,319 ಜನರಿಗೆ ಕೊರೊನಾ ತಪಾಸಣೆ ನಡೆಸಲಾಗಿದ್ದು, ಇದರಲ್ಲಿ 1159 ಮಂದಿಗೆ ಸೋಂಕು ದೃಢಪಟ್ಟಿದೆ.
ಪರಿಣಾಮ ಒಟ್ಟು ಸೋಂಕಿತರ ಪ್ರಮಾಣ 29,50,604 ಕ್ಕೆ ಏರಿಕೆ ಕಂಡಿದೆ. ಪಾಸಿಟಿವಿಟಿ ದರ 0.66% ರಷ್ಟು ದಾಖಲಾಗಿದೆ. ಇಂದು 1112 ಸೋಂಕಿತರು ಗುಣಮುಖರಾಗಿದ್ದು, ಇಲ್ಲಿಯವರೆಗೆ 28,94,827 ಜನರು ಡಿಸ್ಚಾರ್ಜ್ ಆಗಿದ್ದಾರೆ.
ಇತ್ತ ಸಕ್ರಿಯ ಪ್ರಕರಣಗಳು 18,412 ರಷ್ಟು ದಾಖಲಾಗಿವೆ. ಅಲ್ಲದೆ, 21 ಮಂದಿ ಮೃತಪಟ್ಟಿದ್ದಾರೆ. ಪರಿಣಾಮ ಒಟ್ಟು ಸಾವಿನ ಸಂಖ್ಯೆ 37,339 ಕ್ಕೆ ಏರಿದೆ. ಸಾವಿನ ಪ್ರಮಾಣ 2.05% ರಷ್ಟು ದಾಖಲಾಗಿದೆ. ವಿಮಾನ ನಿಲ್ದಾಣದಿಂದ 828 ಪ್ರಯಾಣಿಕರು ಆಗಮಿಸಿ ತಪಾಸಣೆಗೊಳಪಟ್ಟಿದ್ದಾರೆ. 79 ಪ್ರಯಾಣಿಕರು ಯುಕೆಯಿಂದ ಆಗಮಿಸಿದ್ದಾರೆ.