ಬೆಂಗಳೂರು:ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 40,499 ಸೋಂಕು ಪ್ರಕರಣಗಳು ದಾಖಲಾಗಿವೆ.
ರಾಜ್ಯದಲ್ಲಿ ಇಂದು ಕೋವಿಡ್ನಿಂದ 21 ಮಂದಿ ಸಾವನ್ನಪ್ಪಿದ್ದು, ಇಂದಿನ ಪಾಸಿಟಿವಿಟಿ ದರ ಶೇ. 18.80 ಹಾಗೂ ಸಾವಿನ ಪ್ರಮಾಣ ಶೇ. 0.05ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇಂದು 2,15,312 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, 23,209 ಜನರು ಚೇತರಿಸಿಕೊಂಡಿದ್ದಾರೆ. ಸದ್ಯ ರಾಜ್ಯಾದ್ಯಂತ 2,67,650 ಸಕ್ರಿಯ ಪ್ರಕರಣಗಳಿವೆ. ವಿಮಾನ ನಿಲ್ದಾಣದಿಂದ 979 ಪ್ರಯಾಣಿಕರು ಆಗಮಿಸಿದ್ದು, ತಪಾಸಣೆಗೆ ಒಳಪಟ್ಟಿದ್ದಾರೆ. ಹೈ ರಿಸ್ಕ್ ದೇಶಗಳಿಂದ 240 ಪ್ರಯಾಣಿಕರು ಆಗಮಿಸಿದ್ದಾರೆ.