ಬೆಂಗಳೂರು:ರಾಜ್ಯದಲ್ಲಿ ಇಂದು ಹೊಸದಾಗಿ 42,470 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 26 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇಂದು 2,19,699 ಜನರಿಗೆ ಕೊರೊನಾ ಪರೀಕ್ಷೆ ನಡೆಸಿದ್ದು, ಸಕ್ರಿಯ ಪ್ರಕರಣಗಳು 3,30,447ಕ್ಕೆ ತಲುಪಿದೆ. ಪಾಸಿಟಿವಿಟಿ ದರವು ಶೇ. 19.33 ಹಾಗೂ ಸಾವಿನ ಪ್ರಮಾಣ ಶೇ. 0.06ರಷ್ಟಿದೆ. 35,140 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಜಾಹಿರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ವಿಮಾನ ನಿಲ್ದಾಣದಿಂದ 1273 ಪ್ರಯಾಣಿಕರು ಆಗಮಿಸಿದ್ದು, ತಪಾಸಣೆಗೆ ಒಳಪಟ್ಟಿದ್ದಾರೆ. ಹೈ ರಿಸ್ಕ್ ದೇಶದಿಂದ 410 ಜನರು ಬಂದಿಳಿದಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿ 17,266 ಮಂದಿಗೆ ಸೋಂಕು ದೃಢಪಟ್ಟಿದ್ದು, ನಗರದಲ್ಲಿ 2,18,329 ಸಕ್ರಿಯ ಪ್ರಕರಣಗಳಿವೆ. ಅಲ್ಲದೆ ಇಂದು 6 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟೂ ಸೋಂಕಿತರ ಸಂಖ್ಯೆ 15,59,358ಕ್ಕೆ ಏರಿದ್ದು, ಶನಿವಾರ 22,511ಜನರು ಚೇತರಿಕೆ ಕಂಡಿದ್ದಾರೆ. ಇದುವರೆಗೆ 16,490 ಸೋಂಕಿತರು ಮೃತಪಟ್ಟಿದ್ದಾರೆ.
ರೂಪಾಂತರಿ ಮಾಹಿತಿ:
ಅಲ್ಪಾ - 156
ಬೀಟಾ - 08