ಬೆಂಗಳೂರು :ರಾಜ್ಯದಲ್ಲಿಂದು 52,475 ಜನರಿಗೆ ಕೊರೊನಾ ಪರೀಕ್ಷೆ ನಡೆಸಿದ್ದು, ಅದರಲ್ಲಿ 366 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,40,795 ಕ್ಕೆ ಏರಿಕೆ ಆಗಿದೆ. ಪಾಸಿಟಿವ್ ದರವೂ 0.68% ರಷ್ಟಿದೆ. ಇತ್ತ 801 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 38,94,333 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಸದ್ಯ 6,488 ಸಕ್ರಿಯ ಪ್ರಕರಣಗಳಿವೆ. ಸೋಂಕಿಗೆ 17 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 39,936ಕ್ಕೆ ಏರಿಕೆ ಕಂಡಿದೆ. ಡೆತ್ ರೇಟ್ 4.64% ರಷ್ಟಿದೆ. ವಿಮಾನ ನಿಲ್ದಾಣದಿಂದ 2,411ಪ್ರಯಾಣಿಕರು ಆಗಮಿಸಿದ್ದಾರೆ.
ಬೆಂಗಳೂರಿನಲ್ಲಿ 224 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 17,78,361 ಕ್ಕೆ ಏರಿಕೆ ಆಗಿದೆ. 326 ಮಂದಿ ಡಿಸ್ಚಾರ್ಜ್ ಆಗಿದ್ದು, ಈತನಕ 17,57,805 ಗುಣಮುಖರಾಗಿದ್ದಾರೆ. 11 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 16,907ಕ್ಕೆ ಏರಿದೆ. ಸದ್ಯ 3,648 ಸಕ್ರಿಯ ಪ್ರಕರಣಗಳಿವೆ.
ರೂಪಾಂತರಿ ವೈರಸ್ ಅಪ್ಡೇಟ್ಸ್ :
ಅಲ್ಪಾ- 156
ಬೀಟಾ-08