ಬೆಂಗಳೂರು:ರಾಜ್ಯದಲ್ಲಿ ಇಂದು 31,154 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 1329 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 1,614 ಮಂದಿ ವೈರಸ್ನಿಂದ ಗುಣಮುಖರಾಗಿದ್ದಾರೆ. ಸೋಂಕಿನಿಂದ ಐವರು ಮೃತಪಟ್ಟಿದ್ದಾರೆ.
ಸದ್ಯ ರಾಜ್ಯದಲ್ಲಿ 10,105 ಸಕ್ರಿಯ ಪ್ರಕರಣಗಳು ಇವೆ. ಸೋಂಕಿತರ ಪ್ರಮಾಣ ಶೇ. 4.26, ವಾರದ ಸೋಂಕಿತರ ಪ್ರಮಾಣ ಶೇ. 6.07 ಹಾಗೂ ವಾರದ ಸಾವಿನ ಪ್ರಮಾಣ ಶೇ. 0.26 ಇದೆ. ವಿಮಾನ ನಿಲ್ದಾಣದಿಂದ 3,998 ಮಂದಿ ತಪಾಸಣೆಗೆ ಒಳಪಟ್ಟಿದ್ದಾರೆ.