ಬೆಂಗಳೂರು: ರಾಜ್ಯದಲ್ಲಿ 29,104 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 1191 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 2,032 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್ ಸೋಂಕಿನಿಂದ ಮೂವರು ಮೃತಪಟ್ಟಿದ್ದಾರೆ. ಸದ್ಯ 7,856 ಕೋವಿಡ್ ಸಕ್ರಿಯ ಪ್ರಕರಣ ಇವೆ.
ರಾಜ್ಯದಲ್ಲಿ ಸೋಂಕಿತರ ಪ್ರಮಾಣ ಶೇ. 4.09, ವಾರದ ಸೋಂಕಿತರ ಪ್ರಮಾಣ ಶೇ. 4.84 ಹಾಗೂ ವಾರದ ಸಾವಿನ ಪ್ರಮಾಣ ಶೇ. 0.25 ಇದೆ. ವಿಮಾನ ನಿಲ್ದಾಣದಿಂದ 6,823 ಮಂದಿ ತಪಾಸಣೆಗೆ ಒಳಪಟ್ಟಿದ್ದಾರೆ.