ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿಂದು 1186 ಮಂದಿಗೆ ಕೋವಿಡ್ ಸೋಂಕು : ಇಬ್ಬರು ಸಾವು - etv bharat kannada

ಬೆಂಗಳೂರಿನಲ್ಲಿ ಇಂದು 635 ಮಂದಿಗೆ ಕೋವಿಡ್ ಸೋಂಕು ತಗುಲಿದೆ. 693 ಮಂದಿ ಚೇತರಿಸಿಕೊಂಡಿದ್ದಾರೆ. ರಾಜಧಾನಿಯಲ್ಲಿ ಕೋವಿಡ್ ಸಾವಿನ ಸಂಖ್ಯೆ ಶೂನ್ಯ. 5,128 ಕೋವಿಡ್ ಸಕ್ರಿಯ ಪ್ರಕರಣಗಳು ಇದೆ.

Etv Bharatkarnataka-covid-report
ರಾಜ್ಯದಲ್ಲಿಂದು 1186 ಮಂದಿಗೆ ಕೋವಿಡ್ ಸೋಂಕು : ಇಬ್ಬರು ಸಾವು

By

Published : Aug 27, 2022, 9:41 PM IST

Updated : Aug 27, 2022, 9:49 PM IST

ಬೆಂಗಳೂರು:ರಾಜ್ಯದಲ್ಲಿ ಇಂದು 27,562 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 1,186 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 1,118 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಸದ್ಯ 7,922 ಸಕ್ರಿಯ ಪ್ರಕರಣಗಳು ಇವೆ.

ರಾಜ್ಯದಲ್ಲಿ ಸೋಂಕಿತರ ಪ್ರಮಾಣ ಶೇ. 4.30, ವಾರದ ಸೋಂಕಿತರ ಪ್ರಮಾಣ ಶೇ. 4.69 ಹಾಗೂ ವಾರದ ಸಾವಿನ ಪ್ರಮಾಣ ಶೇ. 0.24 ಇದೆ. ವಿಮಾನ ನಿಲ್ದಾಣದಿಂದ ಇಂದು 3812 ಮಂದಿ ತಪಾಸಣೆಗೆ ಒಳಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಇಂದು 635 ಮಂದಿಗೆ ಕೋವಿಡ್ ಸೋಂಕು ತಗುಲಿದೆ. 693 ಮಂದಿ ಚೇತರಿಸಿಕೊಂಡಿದ್ದಾರೆ. ರಾಜಧಾನಿಯಲ್ಲಿ ಕೋವಿಡ್ ಸಾವಿನ ಸಂಖ್ಯೆ ಶೂನ್ಯ. 5,128 ಕೋವಿಡ್ ಸಕ್ರಿಯ ಪ್ರಕರಣಗಳು ಇವೆ. ಇದುವರೆಗೆ ವೈರಸ್​ನಿಂದ 16,981 ಜನರು ಮೃತಪಟ್ಟಿದ್ದಾರೆ.

ಇದನ್ನೂ ಓದಿ:ಐದು ವರ್ಷದೊಳಗಿನ ಮಕ್ಕಳಿಗೆ ಫೈಜರ್​ ಲಸಿಕೆ ಶೇ 73ರಷ್ಟು ಪರಿಣಾಮಕಾರಿ

Last Updated : Aug 27, 2022, 9:49 PM IST

ABOUT THE AUTHOR

...view details