ಬೆಂಗಳೂರು: ರಾಜ್ಯದಲ್ಲಿಂದು 1,71,765 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದ್ದು, 5,815 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 28,01,936ಕ್ಕೆ ಏರಿಕೆ ಕಂಡಿದ್ದು, ಪಾಸಿಟಿವಿಟಿ ದರ 3.38% ರಷ್ಟಿದೆ.
11,832 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 26,37,279 ಜನರು ಚೇತರಿಸಿಕೊಂಡಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳು 1,30,872 ರಷ್ಟಿದ್ದು, ಚಿಕಿತ್ಸೆ ಮುಂದುವರೆದಿದೆ. ಕೋವಿಡ್ಗೆ 161 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 33,763ಕ್ಕೆ ಏರಿದೆ. ಸಾವಿನ ಶೇಕಡವಾರು ಪ್ರಮಾಣ 2.76 ರಷ್ಟಿದೆ.