ಬೆಂಗಳೂರು : ರಾಜ್ಯದಲ್ಲಿಂದು 13,550 ಮಂದಿ ಕೋವಿಡ್ ಮುಕ್ತರಾಗಿದ್ದಾರೆ. ಹೊಸದಾಗಿ 5,778 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 7,88,551 ಕ್ಕೆ ಏರಿಕೆಯಾಗಿದೆ.
ರಾಜ್ಯದ ಕೋವಿಡ್ ಪ್ರಕರಣಗಳಲ್ಲಿ ಇಳಿಕೆ : ಇಂದು 5,778 ಪಾಸಿಟಿವ್, 13,550 ಮಂದಿ ಗುಣಮುಖ - ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳು
ರಾಜ್ಯದಲ್ಲಿ ಪ್ರಸ್ತುತ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 92,927 ಇದ್ದು, ಇಂದು 13,550 ಮಂದಿ ಸೋಂಕು ಮುಕ್ತರಾಗಿದ್ದಾರೆ.
ಕರ್ನಾಟಕ ಕೋವಿಡ್ ಸುದ್ದಿ
ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 92,927 ಇದೆ. ಇಂದು 13,550 ಮಂದಿ ಗುಣಮುಖರಾಗಿದ್ದು, ಈವರೆಗೆ 6,84,835 ಮಂದಿ ಸೋಂಕು ಮುಕ್ತರಾಗಿದ್ದಾರೆ. ಇಂದು 74 ಮಂದಿ ಮೃತಪಟ್ಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 10,770 ಆಗಿದೆ. ಐಸಿಯುನಲ್ಲಿ 940 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಇಂದು 2,807 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 7,683 ಮಂದಿ ಗುಣಮುಖರಾಗಿದ್ದಾರೆ. ಇಂದು 36 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ ಒಟ್ಟು 70,60,189 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.