ಬೆಂಗಳೂರು: ರಾಜ್ಯದಲ್ಲಿಂದು 1,12,780 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 357 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,82,089ಕ್ಕೆ ಏರಿಕೆ ಆಗಿದೆ.
ಇತ್ತ 438 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೂ 29,34,523 ಮಂದಿ ಗುಣಮುಖರಾಗಿದ್ದಾರೆ. 10 ಸೋಂಕಿತರು ಮೃತರಾಗಿದ್ದಾರೆ. ಸಾವಿನ ಸಂಖ್ಯೆ 37,916ಕ್ಕೆ ಏರಿದೆ. ಸದ್ಯ ಸಕ್ರಿಯ ಪ್ರಕರಣಗಳು 9621 ರಷ್ಟಿವೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ.0.31ರಷ್ಟಿದ್ದರೆ, ಸಾವಿನ ಪ್ರಮಾಣ ಶೇ.2.80ರಷ್ಟಿದೆ.