ಕರ್ನಾಟಕ

karnataka

ETV Bharat / state

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ರಾಷ್ಟ್ರ ಪ್ರಶಸ್ತಿ ವಿಜೇತರಿಗೆ ಸನ್ಮಾನ.. - Kannada Film Indusrty

ಸ್ಯಾಂಡಲ್​ವುಡ್​ಗೆ ಈ ಬಾರಿ ಒಟ್ಟು 13 ರಾಷ್ಟ್ರಪ್ರಶಸ್ತಿ ದೊರಕಿದ ಹಿನ್ನಲೆ, ಪ್ರಶಸ್ತಿ ವಿಜೇತರನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ರಾಷ್ಟ್ರ ಪ್ರಶಸ್ತಿ ವಿಜೇತರಿಗೆ ಸನ್ಮಾನ

By

Published : Aug 16, 2019, 8:46 PM IST

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ರಾಷ್ಟ್ರ ಪ್ರಶಸ್ತಿ ವಿಜೇತರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.

ಈ ಬಾರಿ ಸ್ಯಾಂಡಲ್​ವುಡ್​ಗೆ ಒಟ್ಟು 13 ರಾಷ್ಟ್ರ ಪ್ರಶಸ್ತಿಗಳು ಒಲಿದ್ದು ಬಂದಿವೆ. ಈ ಮೂಲಕ ಕನ್ನಡ ಚಿತ್ರರಂಗ ಇತಿಹಾಸ ಸೃಷ್ಟಿಸಿದೆ. ಈ ಹಿನ್ನಲೆ ಚಲಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ಪ್ರಶಸ್ತಿ ವಿಜೇತರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ನಾತಿಚರಾಮಿ, ಕೆಜಿಎಫ್, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೂಕಜ್ಜಿಯ ಕನಸುಗಳು ಚಿತ್ರತಂಡಗಳ ಸದಸ್ಯರು, ನಿರ್ದೇಶಕ ಮಂಸೋರೆ, ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ, ನಿರ್ಮಾಪಕ ಉಮಾಪತಿ ಹಾಗೂ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಚಿನ್ನೆಗೌಡ್ರು ಮತ್ತು ಪದಾಧಿಕಾರಿಗಳು ಹಾಜರಿದ್ದರು.

ABOUT THE AUTHOR

...view details