ಕರ್ನಾಟಕ

karnataka

ETV Bharat / state

ಹುತಾತ್ಮ ಯೋಧರ ಕುಟುಂಬದ ಓರ್ವ ಸದಸ್ಯನಿಗೆ ಸರ್ಕಾರಿ ಉದ್ಯೋಗ

ದೇಶಕ್ಕಾಗಿ ವೀರ ಮರಣವನ್ನಪ್ಪಿದ ಸೈನಿಕರ ಕುಟುಂಬದ ಸದಸ್ಯರುಗಳಿಗೆ ಆಸರೆಯಾಗಿ ನಿಲ್ಲುವ ಉದ್ದೇಶದಿಂದ ಸರ್ಕಾರವು ಹುತಾತ್ಮ ಸೈನಿಕರ ಕುಟುಂಬ ಸದಸ್ಯರೊಬ್ಬರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡಲು ತಾತ್ವಿಕ ಅನುಮೋದನೆ ನೀಡಿದೆ.

Vidhana Soudha
ವಿಧಾನಸೌಧ

By

Published : Sep 16, 2022, 6:51 AM IST

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಸಿಎಂ ಬಸವರಾಜ​ ಬೊಮ್ಮಾಯಿ ಘೋಷಣೆ ಮಾಡಿದಂತೆ ಹುತಾತ್ಮ ಯೋಧರ ಕುಟುಂಬದ ಓರ್ವ ಸದಸ್ಯನಿಗೆ ಸರ್ಕಾರಿ ಉದ್ಯೋಗ ನೀಡುವ ಪ್ರಸ್ತಾವನೆಗೆ ರಾಜ್ಯ ಸರ್ಕಾರ ತಾತ್ವಿಕ ಒಪ್ಪಿಗೆ ಕೊಟ್ಟಿದೆ.

ಈ ಸಂಬಂಧ ಆದೇಶ ಹೊರಡಿಸಿರುವ ಸರ್ಕಾರ, 'ದೇಶದ ಆಂತರಿಕ ಹಾಗೂ ಬಾಹ್ಯ ಸುರಕ್ಷತೆಗಾಗಿ ಹೋರಾಡುವ ಯೋಧರು ತಮ್ಮ ಪ್ರಾಣ ಪಣಕ್ಕಿಟ್ಟು ದೇಶ ಸೇವೆ ಸಲ್ಲಿಸುತ್ತಾರೆ. ರಾಜ್ಯದ ಮೂಲ ನಿವಾಸಿಗಳಾದ, ಯುದ್ಧದಂತಹ ಕಾರ್ಯಚರಣೆಯಲ್ಲಿ ಪಾಲ್ಗೊಂಡು ವೀರ ಮರಣವನ್ನಪ್ಪಿದ ಸೈನಿಕರ ಕುಟುಂಬ ಸದಸ್ಯರುಗಳಿಗೆ ಆಸರೆಯಾಗಿ ನಿಲ್ಲುವ ಉದ್ದೇಶದಿಂದ ಅವರ ಅವಲಂಬಿತರಲ್ಲಿ ಒಬ್ಬರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡಲು ಸರ್ಕಾರ ತಾತ್ವಿಕ ಅನುಮೋದನೆ ನೀಡಿದೆ' ಎಂದು ತಿಳಿಸಿದೆ.

ಇದನ್ನೂ ಓದಿ:ಹುತಾತ್ಮ ಅರಣ್ಯ ರಕ್ಷಕರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ: ಸಿಎಂ ಬೊಮ್ಮಾಯಿ

ಈಗಾಗಲೇ ಹುತಾತ್ಮ ವೀರ ಯೋಧರ ಅವಲಂಬಿತರಿಗೆ ಮಾಜಿ ಸೈನಿಕರ ಮೀಸಲಾತಿಯಡಿ ಎಲ್ಲಾ ವೃಂದದ ಹುದ್ದೆಗಳಲ್ಲಿ 10% ಮೀಸಲಾತಿಯನ್ನು ಕಲ್ಪಿಸಲಾಗಿದೆ. ರಾಜ್ಯದಲ್ಲಿ ಹುತಾತ್ಮ ಯೋಧರ 400 ಕುಟುಂಬಗಳಿವೆ. ಅವರಲ್ಲಿ ಸುಮಾರು 200 ಮಂದಿ ಅವಲಂಬಿತರು ಅನುಕಂಪದ ಆಧಾರದ ಮೇಲೆ ನೇಮಕಾತಿಗೆ ಅರ್ಹರಿದ್ದಾರೆ.

ಇದನ್ನೂ ಓದಿ:ಗೋಕಾಕ್: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಯೋಧನ ಅಂತ್ಯಕ್ರಿಯೆ

ABOUT THE AUTHOR

...view details