ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ತಮ್ಮ ಮಠದ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಡ ಮಕ್ಕಳನ್ನು ಲೈಂಗಿಕವಾಗಿ ಶೋಷಿಸಿದ ಆರೋಪವಿದೆ. ಅವರೊಬ್ಬ ಪ್ರಭಾವಿ ವ್ಯಕ್ತಿಯೂ ಆಗಿರುವುದರಿಂದ ಜಾಮೀನು ನೀಡಬಾರದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮನವಿ ಮಾಡಿದೆ. ಜಾಮೀನು ಕೋರಿ ಶಿವಮೂರ್ತಿ ಶರಣರು ಸಲ್ಲಿಸಿರುವ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠಕ್ಕೆ ಸರ್ಕಾರಿ ವಕೀಲರು ಮನವಿ ಮಾಡಿದರು.
ತನಿಖೆಯಲ್ಲಿ ಸ್ವಾಮೀಜಿ ಅಪರಾಧ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇದೊಂದು ಗಂಭೀರ ಮತ್ತು ಪ್ರಭಾವಿ ವ್ಯಕ್ತಿಯ ವಿರುದ್ಧದ ಕ್ರಿಮಿನಲ್ ಕೇಸು. ಶ್ರೀಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012ರ ಪೋಕ್ಸೋ) ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದರು. ದಿನದ ಕಲಾಪ ಮುಗಿದ ಕಾರಣ ವಿಚಾರಣೆಯನ್ನು ಮಂಗಳವಾರಕ್ಕೆ (ಅ.31) ಮುಂದೂಡಲಾಗಿದೆ.