ಕರ್ನಾಟಕ

karnataka

ETV Bharat / state

ಏಳು ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ - ಐಎಎಸ್​ ಅಧಿಕಾರಿಗಳ ವರ್ಗಾವಣೆ

ಏಳು ಮಂದಿ ಐಎಎಸ್​ ಅಧಿಕಾರಿಗಳನ್ನು ವರ್ಗಾಸಯಿಸಿ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ಸರ್ಕಾರದ ಐಎಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕ ಸರ್ಕಾರದ ಐಎಎಸ್ ಅಧಿಕಾರಿಗಳ ವರ್ಗಾವಣೆ

By

Published : Aug 21, 2022, 7:40 AM IST

ಬೆಂಗಳೂರು: ರಾಜ್ಯ ಸರ್ಕಾರ ಏಳು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ವರ್ಗಾವಣೆಯಾದವರ ವಿವರ:

  • ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಅವರನ್ನು ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
  • ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್ ಅವರಿಗೆ ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸ್ಥಾನ ನೀಡಲಾಗಿದೆ.
  • ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಅವರನ್ನು ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡುವ ಜೊತೆಗೆ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
  • ಡಿಪಿಎಆರ್(ಇ-ಆಡಳಿತ) ಕಾರ್ಯದರ್ಶಿ ವಿ.ಪೊನ್ನುರಾಜ್ ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
  • ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮತ್ತು ಕಾರ್ಯಕಾರಿ ಸದಸ್ಯ ಸ್ಥಾನಕ್ಕೆ ವರ್ಗಾಯಿಸಲಾಗಿದೆ.
  • ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮತ್ತು ಕಾರ್ಯಕಾರಿ ಸದಸ್ಯರಾಗಿದ್ದ ಡಾ.ಎನ್.ಶಿವಶಂಕರ್ ಅವರನ್ನು ನಗರಾಡಳಿತ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ. ಈ ಸ್ಥಾನದಲ್ಲಿದ್ದ ಅರ್ಚನಾ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: ಬಿಬಿಎಂಪಿ ಚುನಾವಣೆಗೆ ಆಗಸ್ಟ್ 25 ರಂದು ಮತದಾರರ ಕರಡು ಪಟ್ಟಿ ಪ್ರಕಟ

ABOUT THE AUTHOR

...view details