ಬೆಂಗಳೂರು:ಪ್ರತಿವರ್ಷದಂತೆ 2022-23ನೇ ಸಾಲಿಗೆ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇ 1ರಿಂದ ಜೂನ್ 15ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಸಂಬಂಧಪಟ್ಟ ಇಲಾಖಾ ಸಚಿವರಿಗೆ ಅಧಿಕಾರ ನೀಡಲಾಗಿದೆ.
ಎಲ್ಲಾ ಇಲಾಖೆಗಳ ಗ್ರೂಪ್ ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿ ಮತ್ತು ನೌಕರರಿಗೆ ಅನ್ವಯವಾಗುವಂತೆ ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ರಷ್ಟು ಮೀರಬಾರದು ಎಂದು ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಈ ಮೊದಲು ಮೇ ಮತ್ತು ಜೂನ್ ತಿಂಗಳಲ್ಲಿ ಶೇ.4-5 ರಷ್ಟು ನೌಕರರ ವರ್ಗಾವಣೆಗೆ ಅವಕಾಶ ನೀಡಲಾಗಿತ್ತು. 2020-21ನೇ ಸಾಲಿನಿಂದ ಶೇ.6ರಷ್ಟು ಮೀರದಂತೆ ವರ್ಗಾವಣೆಗೆ ಅವಕಾಶ ನೀಡಲಾಗಿದೆ.