ಬೆಂಗಳೂರು:ಕರ್ನಾಟಕದಲ್ಲಿ ಕೊರೊನಾ 3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ಮುಂಜಾಗ್ರತಾ ಕ್ರಮಗಳಿಗೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ವಿದೇಶದಿಂದ ರಾಜ್ಯಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ RT-PCR ಟೆಸ್ಟ್ ಕಡ್ಡಾಯಗೊಳಿಸಲಾಗಿದೆ.
ವಿದೇಶದಿಂದ ಆಗಮಿಸುವವರಲ್ಲಿ SARS- COV- 2 ಪ್ರಕರಣಗಳು ವರದಿಯಾಗುತ್ತಿದ್ದು ಕೆಲವು ಆಯ್ದ ದೇಶಗಳಿಂದ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಿಗೆ ಈ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ.
ಬಾಂಗ್ಲಾದೇಶ, ಬೋಟ್ಸ್ವಾನ, ಚೀನಾ, ಮಾರಿಷಸ್, ನ್ಯೂಜಿಲೆಂಡ್ ಮತ್ತು ಜಿಂಬಾಂಬ್ವೆಯಿಂದ ಬರುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಯುಕೆ, ಯೂರೋಪ್ ದಕ್ಷಿಣ ಆಫ್ರಿಕಾ, ಬ್ರೆಜಿಲ್ ದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ಟೆಸ್ಟ್ ಕಡ್ಡಾಯಗೊಳಿಸಲಾಗಿತ್ತು.
ಇದನ್ನೂ ಓದಿ:ರಾಜ್ಯದಲ್ಲಿಂದು 1159 ಮಂದಿಗೆ COVID ದೃಢ; 21 ಸೋಂಕಿತರು ಸಾವು
ಈ ಎಲ್ಲಾ ದೇಶಗಳಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಥವಾ ರಾಜ್ಯದ ಇತರೆ ವಿಮಾನ ನಿಲ್ದಾಣಗಳಿಗೆ ಆಗಮಿಸುವ ಪ್ರತಿಯೊಬ್ಬರೂ ಕೋವಿಡ್ ಟೆಸ್ಟ್‌ಗಾಗಿ ಸ್ಯಾಂಪಲ್ಗಳನ್ನು ನೀಡಬೇಕು ಮತ್ತು ಇತರೆ ಕೊರೊನಾ ನಿಯಮಾವಳಿಗಳನ್ನು ಪಾಲಿಸಿ ಏರ್ಪೋರ್ಟ್ನಿಂದ ತೆರಳಬೇಕು ಎಂದು ತಿಳಿಸಲಾಗಿದೆ.