ಬೆಂಗಳೂರು:ಮೊನ್ನೆಯಷ್ಟೇ 9 ಮಂದಿ ಐಪಿಎಸ್ ಅಧಿಕಾರಿಗಳೊಂದಿಗೆ ವರ್ಗಾವಣೆಗೊಂಡಿದ್ದ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರ ವರ್ಗಾವಣೆ ಆದೇಶವನ್ನು ರಾಜ್ಯ ಸರ್ಕಾರ ತಡೆಹಿಡಿದಿದೆ.
ರವಿ ಡಿ. ಚನ್ನಣ್ಣವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳನ್ನು ಜನವರಿ 27 ರಂದು ಸರ್ಕಾರ ವರ್ಗಾವಣೆ ಮಾಡಿತ್ತು. ಸಿಐಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಚನ್ನಣ್ಣವರ್ ಅವರನ್ನು ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಿಸಿ ವರ್ಗಾವಣೆ ಮಾಡಲಾಗಿತ್ತು. ಆದರೆ, ಸರ್ಕಾರ ಈ ವರ್ಗಾವಣೆ ಆದೇಶವನ್ನು ದಿಢೀರ್ ತಡೆಹಿಡಿದಿದೆ.